ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ಡ ಮತದಾನ: ಹರಿಯಾಣ ಕಾಂಗ್ರೆಸ್ ಶಾಸಕ ಕುಲದೀಪ್ ಬಿಷ್ಣೋಯಿ ಉಚ್ಚಾಟನೆ

Last Updated 11 ಜೂನ್ 2022, 14:25 IST
ಅಕ್ಷರ ಗಾತ್ರ

ಗುರುಗ್ರಾಮ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಶಾಸಕ ಕುಲದೀಪ್ ಬಿಷ್ಣೋಯಿ ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ಕಾಂಗ್ರೆಸ್ ಉಚ್ಚಾಟನೆ ಮಾಡಿದೆ.

ಹಿಸಾರ್ ಜಿಲ್ಲೆಯ ಅದಮ್‌ಪುರ್ ಕ್ಷೇತ್ರದ ಶಾಸಕರಾಗಿರುವ ಕುಲದೀಪ್, ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಅವರಿಗೆ ಅಡ್ಡ ಮತದಾನ ಮಾಡಿದ್ದರು.

‘ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಶಾಸಕ ಕುಲದೀಪ್ ಬಿಷ್ಣೋಯಿ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರ ಸ್ಥಾನ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದ ಉಚ್ಚಾಟನೆ ಮಾಡಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ಎಲ್ಲ ಸಭೆಗಳಿಂದ ದೂರವಿದ್ದ ಬಿಷ್ಣೋಯಿ, ತನ್ನ ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಹೇಳಿದ್ದರು.

ಹರಿಯಾಣದ ಎರಡು ಕ್ಷೇತ್ರಗಳ ಪೈಕಿ ಬಿಜೆಪಿಯಕೃಷ್ಣಲಾಲ್‌ ಪನ್ವರ್,ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಜಯ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT