ಬುಧವಾರ, ಸೆಪ್ಟೆಂಬರ್ 29, 2021
20 °C

‘ಪಂಜ್‌ ಪ್ಯಾರೆ’ ಪದ ಬಳಕೆ; ಕಾಂಗ್ರೆಸ್‌ ನಾಯಕ ಹರೀಶ್ ರಾವತ್‌ ಕ್ಷಮೆಯಾಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ಹರೀಶ್ ರಾವತ್‌

ಚಂಡೀಗಡ: ಪಂಜಾಬ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರನ್ನು ಮತ್ತು ನಾಲ್ವರು ಕಾರ್ಯಾಧ್ಯಕ್ಷರನ್ನು ‘ಪಂಜ್ ಪ್ಯಾರೆ’ ಎಂದು ಕರೆದಿದ್ದಕ್ಕಾಗಿ ಕ್ಷಮೆಯಾಚಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್‌ ಅವರು ಗುರುದ್ವಾರದಲ್ಲಿ ಗುಡಿಸುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

‌ಹರೀಶ್‌ ರಾವತ್‌ ಅವರು ಚಂಡೀಗಡದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಂಜಾಬ್‌ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮತ್ತು ನಾಲ್ವರು ಕಾರ್ಯಾಧ್ಯಕ್ಷರನ್ನು ‘ಪಂಜ್‌ ಪ್ಯಾರೆ’ ಎಂದು ಕರೆದಿದ್ದರು.

ಸಿಖ್ ಸಂಪ್ರದಾಯದಲ್ಲಿ ‘ಪಂಜ್ ಪ್ಯಾರೆ’ ಎಂಬುದು ಗುರು ಗೋವಿಂದ್‌ ಸಿಂಗ್‌ ಅವರ ಐವರು ಆತ್ಮೀಯರಿಗಾಗಿ ಬಳಸುವ ಪದವಾಗಿದೆ.

ಫೇಸ್‌ಬುಕ್‌ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡ ರಾವತ್‌ ಅವರು, ಜನರಲ್ಲಿ ಕ್ಷಮೆಯಾಚಿಸಿದರು.

‘ಪಂಜ್‌ ಪ್ಯಾರೆ’ ಶಬ್ಧವನ್ನು ಯಾರಿಗೂ ಹೋಲಿಸಲು ಸಾಧ್ಯವಿಲ್ಲ. ನನ್ನಿಂದ ತಪ್ಪಾಗಿದೆ. ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ’ ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು