ಶುಕ್ರವಾರ, ನವೆಂಬರ್ 27, 2020
21 °C

ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ: ದಿಗ್ವಿಜಯ್ ಸಿಂಗ್

ಎಎನ್‌ಐ Updated:

ಅಕ್ಷರ ಗಾತ್ರ : | |

Digvijaya Singh

ಗ್ವಾಲಿಯರ್: ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದ ನಂತರ ಕಾಂಗ್ರೆಸ್ ಪುನಶ್ಚೇತನಗೊಂಡಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಗ್ವಾಲಿಯರ್–ಚಂಬಲ್ ಪ್ರದೇಶದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂದು ಸಿಂಧಿಯಾ ಪಕ್ಷ ತ್ಯಜಿಸಿದ ಬಳಿಕ ಜನ ಹೇಳುತ್ತಿದ್ದರು. ಆದರೆ ನಾನು ಹೇಳುತ್ತೇನೆ, ಅವರು ಪಕ್ಷ ತ್ಯಜಿಸಿದ ಬಳಿಕ ಕಾಂಗ್ರೆಸ್ ಪುನಶ್ಚೇತನಗೊಂಡಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

‘ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕಾಂಗ್ರೆಸ್ ಎಲ್ಲವನ್ನೂ ನೀಡಿತ್ತು. ರಾಹುಲ್, ಪ್ರಿಯಾಂಕಾ, ಸೋನಿಯಾ ಗಾಂಧಿಗೆ ಆಪ್ತರಾಗಿಯೂ ಇದ್ದ ಅವರು ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿದ್ದರು. ಹೀಗಿದ್ದಾಗ ಅವರಿಂದ ನಾನು ಅಂತಹದ್ದನ್ನು ನಿರೀಕ್ಷಿಸಿರಲಿಲ್ಲ’ ಎಂದು ದಿಗ್ವಿಜಯ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕೆ ಸಂಬಂಧಿಸಿದ ಚರ್ಚೆಗಳು ತೀವ್ರಗೊಂಡಿರುವ ಮಧ್ಯೆಯೇ ದಿಗ್ವಿಜಯ್ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ.

ಕೇಂದ್ರದ ಮಾಜಿ ಸಚಿವರೂ ಆಗಿರುವ ಸಿಂಧಿಯಾ ಮಾರ್ಚ್‌ 11ರಂದು ಬಿಜೆಪಿ ಸೇರಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು