ಸೋಮವಾರ, ಜನವರಿ 25, 2021
15 °C

ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್ ನಿಧನ: ಗಣ್ಯರ ಕಂಬನಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್(86) ಅವರು ಶನಿವಾರ ನಿಧನರಾದರು.

1962ರಿಂದ 2004ರ ನಡುವಿನ ಅವಧಿಯಲ್ಲಿ ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬೂಟಾ ಸಿಂಗ್‌ ಕೇಂದ್ರದಲ್ಲಿ ಗೃಹ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಮತ್ತು ಪಿ.ವಿ.ನರಸಿಂಹರಾವ್‌ ಆಡಳಿತದಲ್ಲಿ ಸಚಿವರಾಗಿದ್ದ ಅವರು 2004ರಿಂದ 2006ರವರೆಗೆ ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಕಾಂಗ್ರೆಸ್‌ನ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದ ಬೂಟಾ ಸಿಂಗ್‌ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಗಣ್ಯರ ಸಂತಾಪ

ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

'ಅನುಭವಿ ಆಡಳಿತಗಾರರಾಗಿದ್ದ ಬೂಟಾ ಸಿಂಗ್‌ ಅವರು ಬಡವರ ಹಾಗೂ ದೀನ-ದಲಿತರ ಗಟ್ಟಿ ಧ್ವನಿಯಾಗಿದ್ದರು. ಅವರು ತೀರಿಕೊಂಡಿದ್ದಕ್ಕೆ ನನಗೆ ದುಃಖವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು' ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

'ಬೂಟಾ ಸಿಂಗ್ ಅವರ ಸಾವಿನೊಂದಿಗೆ ದೇಶವು ನಿಷ್ಠಾವಂತ ನಾಯಕ ಮತ್ತು ಸಾರ್ವಜನಿಕ ಸೇವಕರೊಬ್ಬರನ್ನು ಕಳೆದುಕೊಂಡಿದೆ. ಅವರು ತಮ್ಮ ಇಡೀ ಜೀವನವನ್ನು ದೇಶದ ಸೇವೆ ಮತ್ತು ಜನರ ಯೋಗಕ್ಷೇಮಕ್ಕಾಗಿ ಮುಡಿಪಾಗಿಟ್ಟಿದ್ದರು. ಅದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು' ಎಂದು ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು