ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕಾಂಗ್ರೆಸ್ ಪ್ರತಿಭಟನೆ ವೇಳೆ ಶ್ರೀನಿವಾಸ್‌ರನ್ನು ಎಳೆದಾಡಿದ ಪೊಲೀಸರು

ವಿಡಿಯೊ ವೈರಲ್
Last Updated 26 ಜುಲೈ 2022, 13:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್‌ನ ರಾಷ್ಟ್ರ ಘಟಕದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಅವರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸರು ತಲೆ ಕೂದಲು ಹಿಡಿದು ಎಳೆದಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್‌, ‘ಪೊಲೀಸರು ನನ್ನ ಕೂದಲನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ.

ಶ್ರೀನಿವಾಸ್‌ ಅವರ ತಲೆ ಕೂದಲು ಹಿಡಿದು ಎಳೆದಾಡುತ್ತಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪೊಲೀಸರ ವರ್ತನೆಗೆ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಅಶಿಸ್ತು ತೋರಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಎರಡೂವರೆ ತಾಸು ವಿಚಾರಣೆಗೆ ಒಳಪಡಿಸಿದೆ.

ಸೋನಿಯಾ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸುವುದರ ವಿರುದ್ಧ ಕಾಂಗ್ರೆಸ್‌ ದೇಶದ ಹಲವೆಡೆ ತೀವ್ರ ಪ್ರತಿಭಟನೆ ನಡೆಸಿದೆ. ರಸ್ತೆ ತಡೆ, ರೈಲು ತಡೆ ನಡೆಸಿದೆ. ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಕೆಲವೆಡೆ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದಾರೆ. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದಾರೆ.‌

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT