ಶುಕ್ರವಾರ, ಡಿಸೆಂಬರ್ 9, 2022
20 °C

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಮಲನಾಥ್‌ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

ಪ್ರಜಾವಾಣಿ ವೆಬ್ ಡೆ‌ಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಧ್ಯ ಪ್ರದೇಶ ಘಟಕದ ಅಧ್ಯಕ್ಷ ಕಮಲನಾಥ್ ಅವರನ್ನು ತಕ್ಷಣವೇ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ನಾಯಕತ್ವಕ್ಕೆ ಸಂಬಂಧಿಸಿ ರಾಜಸ್ಥಾನದಲ್ಲಿ ಬಿರುಸಿನ ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ ಕಮಲನಾಥ್ ಅವರಿಗೆ ಹೈಕಮಾಂಡ್ ಕರೆ ಕಳುಹಿಸಿದೆ. ರಾಜಸ್ಥಾನ ಬಿಕ್ಕಟ್ಟಿಗೆ ಸಂಬಂಧಿಸಿ ಅವರು ಮಧ್ಯಸ್ಥಿಕೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕೆನ್, ವೀಕ್ಷಕ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ರಾಜಸ್ಥಾನಕ್ಕೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನಕ್ಕೆ ತರಳುವ ಮುನ್ನ ದೆಹಲಿಯಲ್ಲಿ ಸಭೆ ನಡೆಸಿದ್ದ ಉಭಯ ನಾಯಕರು, ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಮಾಲೋಚನೆ ನಡೆಸಿದ್ದರು. ಗೆಹಲೋತ್ ಬಣದ ಮೂವರು ನಾಯಕರು ಭೇಟಿಯಾಗಿ ಹಲವು ಪ್ರಸ್ತಾವಗಳನ್ನು ಮುಂದಿಟ್ಟಿದ್ದಾರೆ ಎಂದು ತಿಳಿಸಿದ್ದರು.

ನಾಯಕತ್ವಕ್ಕೆ ಸಂಬಂಧಿಸಿದ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಮತ್ತು ಸಚಿನ್‌ ಪೈಲಟ್‌ ಅವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಬೆಳಿಗ್ಗೆ ಸೂಚಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು