ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ ನಾಥ್ ರಾಜೀನಾಮೆ

Last Updated 28 ಏಪ್ರಿಲ್ 2022, 11:31 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲ ನಾಥ್ ರಾಜೀನಾಮೆ ನೀಡಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅದನ್ನು ಅಂಗೀಕರಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಾ. ಗೋವಿಂದ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಕಮಲ್ ನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ, ‘ಮಧ್ಯ ಪ್ರದೇಶದ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀವು ನೀಡಿದ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ ಎಂಬುದನ್ನು ನಿಮಗೆ ತಿಳಿಸಲು ಇಚ್ಛಿಸುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿಮ್ಮ ಕೊಡುಗೆಯನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ’ಎಂದು ತಿಳಿಸಿದ್ದಾರೆ.

ಇದೇವೇಳೆ, ಡಾ. ಗೋವಿಂದ್ ಸಿಂಗ್ ಅವರನ್ನು ವಿರೋಧ ಪಕ್ಷದ ನಾಯಕನಾಗಿ ನೇಮಕ ಮಾಡುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅಂಗೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT