ಸೋಮವಾರ, ಜನವರಿ 24, 2022
23 °C

ಪ್ರತಿಭಟನಾಕಾರರ ವಿರುದ್ಧ ಲಾಠಿ ಚಾರ್ಜ್: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಖನೌನಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕಾ, ಉತ್ತರ ಪ್ರದೇಶದ ಯುವಕರು ಮೇಣದ ಬತ್ತಿಗಳನ್ನು ಹಿಡಿದು 'ಉದ್ಯೋಗ ಕೊಡಿ' ಎಂದು ಘೋಷಣೆ ಕೂಗುತ್ತಿದ್ದರು. ಆದರೆ, ದುರಾಡಳಿತಕ್ಕೆ ಸಮಾನಾರ್ಥಕವಾಗಿರುವ ಯೋಗಿ ಆದಿತ್ಯನಾಥ ಸರ್ಕಾರ ಯುವಕರನ್ನು ಲಾಠಿಯಿಂದ ಥಳಿಸಿದೆ' ಎಂದು ಆರೋಪಿಸಿದ್ದಾರೆ.

ಹಾಗೆಯೇ ಯುವಕರು ಉದ್ಯೋಗದ ಹಕ್ಕಿಗಾಗಿನ ಹೋರಾಟದ ಜ್ವಾಲೆಯನ್ನು ಆರಲು ಬಿಡಬಾರದು. ಈ ಹೋರಾಟದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಬೆಂಬಲ ಸೂಚಿಸಿದ್ದಾರೆ.

ಇವನ್ನೂ ಓದಿ
ಹುದ್ದೆಗಳು ಖಾಲಿ; ನೇಮಕಾತಿ ಏಕೆ ನಡೆಯುತ್ತಿಲ್ಲ? ಬಿಜೆಪಿ ವಿರುದ್ಧ ವರುಣ್ ಗಾಂಧಿ​
ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಯೋಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಟೀಕೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು