ಶುಕ್ರವಾರ, ಆಗಸ್ಟ್ 19, 2022
22 °C

Punjab Elections: ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ರಾಹುಲ್‌ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೃತಸರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ವರ್ಣ ಮಂದಿರದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಿದರು. ಆ ಮೂಲಕ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆ ಪ್ರಚಾರವನ್ನು ಆರಂಭಿಸಿದರು.

ಪಂಜಾಬ್‌ ವಾಸ್ತವ್ಯದ ಅವಧಿಯಲ್ಲಿ ರಾಹುಲ್‌ ಅವರು 117 ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಹರ್ಮಂದಿರ್ ಸಾಹಿಬ್, ದುರ್ಗಿಯಾನ ಮಂದಿರ ಮತ್ತು ಭಗವಾನ್ ವಾಲ್ಮೀಕಿ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. 

ಸ್ವರ್ಣ ಮಂದಿರದ ಭೇಟಿ ಸಂದರ್ಭದಲ್ಲಿ ರಾಹುಲ್‌ ಅವರೊಂದಿಗೆ ಕಾಂಗ್ರೆಸ್‌ನ ಪಂಜಾಬ್‌ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಮತ್ತು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹಾಜರಿದ್ದರು.

ಪಂಜಾಬ್‌ನಲ್ಲಿ ಫೆಬ್ರುವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು