ಶುಕ್ರವಾರ, ಮೇ 14, 2021
32 °C

ಕೋವಿಡ್‌–19: ಸರ್ಕಾರದ ಕಾರ್ಯತಂತ್ರ ಟೀಕಿಸಿದ ರಾಹುಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ನಿಯಂತ್ರಿಸುವಲ್ಲಿ ಸರ್ಕಾರ ರೂಪಿಸಿದ ಕಾರ್ಯತಂತ್ರಗಳನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಟೀಕಿಸಿದ್ದಾರೆ.

‘ಮನಬಂದಂತೆ ಲಾಕ್‌ಡೌನ್‌ ಹೇರುವುದು, ಗಂಟೆ ಬಾರಿಸುವುದು ಮತ್ತು ದೇವರನ್ನು ಪ್ರಾರ್ಥಿಸಿ ಹಾಡುವುದು’ ಸರ್ಕಾರದ ಕಾರ್ಯತಂತ್ರಗಳಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.

ಕೋವಿಡ್‌–19 ನಿಯಂತ್ರಣ ಮತ್ತು ಲಸಿಕೆ ಅಭಿಯಾನದ ಕುರಿತು ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಯೋಜನೆಗಳನ್ನು ಈ ಹಿಂದೆಯೂ ಕಾಂಗ್ರೆಸ್‌ ಟೀಕಿಸಿತ್ತು. ವೈಜ್ಞಾನಿಕವಾಗಿ ಮತ್ತು ಸಮಗ್ರವಾಗಿ ಯೋಜನೆ ರೂಪಿಸದೆ ಸರ್ಕಾರ ಮನಸ್ಸಿಗೆ ಬಂದಂತೆ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಾಂಗ್ರೆಸ್‌ ಹೇಳಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು