ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

53ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಸಂಭ್ರಮಿಸದಂತೆ ಕಾರ್ಯಕರ್ತರಿಗೆ ಕರೆ

ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಇಂದು (ಭಾನುವಾರ) 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ರಾಹುಲ್‌ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್‌ ಮುಖಂಡರು ಸೇರಿದಂತೆ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

ದೇಶದ ರಕ್ಷಣಾ ಪಡೆಗಳಲ್ಲಿ ನಾಲ್ಕು ವರ್ಷಗಳ ಅಲ್ಪಾವಧಿ ನೇಮಕಾತಿಯ ‘ಅಗ್ನಿಪಥ’ ಯೋಜನೆ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿದೆ. ಯುವಜನತೆ ಪ್ರತಿಭಟನೆಯಲ್ಲಿ ನಿರತರಾಗಿರುವ ಈ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ನನ್ನ ಹುಟ್ಟುಹಬ್ಬದಂದು ಯಾವುದೇ ರೀತಿಯ ಆಚರಣೆಗಳನ್ನು ನಡೆಸದಂತೆ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳಿಗೆ ಮನವಿ ಮಾಡುತ್ತೇನೆ ಎಂದು ರಾಹುಲ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಜೂನ್ 19, 1970ರಂದು ಜನಿಸಿದ ರಾಹುಲ್ ಗಾಂಧಿ ಅವರು ನಾಲ್ಕನೇ ಅವಧಿಗೆ ಲೋಕಸಭಾ ಸಂಸದರಾಗಿದ್ದಾರೆ. ಅಮೇಥಿಯಿಂದ ಮೂರು ಬಾರಿ (2004, 2009 ಮತ್ತು 2014) ಹಾಗೂ 2019ರಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಅಗ್ನಿಪಥ ಯೋಜನೆ ವಿರುದ್ಧ ಕಾಂಗ್ರೆಸ್ ಭಾನುವಾರ ಸತ್ಯಾಗ್ರಹ ನಡೆಸಲಿದೆ.

ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವೆಡೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT