ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾಗೆ ಕೋವಿಡ್ ದೃಢ

Last Updated 4 ಜನವರಿ 2022, 14:23 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರಿಗೆ ಮಂಗಳವಾರ ಕೋವಿಡ್–19 ದೃಢಪಟ್ಟಿದೆ.

ಸೋಮವಾರ ರಾತ್ರಿ ಜ್ವರ ಮತ್ತು ಶೀತದಂತಹ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡದ್ದರಿಂದ ತಾವಾಗಿಯೇ ಸೋಂಕು ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಸುರ್ಜೆವಾಲಾ, 'ಕಳೆದ ರಾತ್ರಿ ಸಾಧಾರಣ ಜ್ವರ ಮತ್ತು ಶೀತದಂತಹ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ನಾನಾಗಿಯೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತಾವಾಗಿಯೇ ಪರೀಕ್ಷೆಗೆ ಒಳಪಡಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಒಂದು ದಿನದ ಹಿಂದಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಬಿಜೆಪಿ ನಾಯಕ ಮನೋಜ್ ತಿವಾರಿ ಅವರಿಗೆ ಕೋವಿಡ್ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT