ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.

ಬೆಳಗ್ಗೆ 9.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ಭಾನುವಾರ ರಾತ್ರಿ ದೆಹಲಿಗೆ ಬಂದಿದ್ದರು.

ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಬಂದಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜ ಜೊತೆಗಿದ್ದರು.

ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.

ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.