ಬುಧವಾರ, ಆಗಸ್ಟ್ 10, 2022
20 °C

ರಾಹುಲ್‌ ಜನ್ಮದಿನ: ಗಣ್ಯರಿಂದ ಹಾರೈಕೆ, ಸದಾ ಜೊತೆ ನಡೆಯುವೆ ಎಂದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (51 ವರ್ಷ) ಅವರ ಹುಟ್ಟುಹಬ್ಬದ (ಜೂನ್ 19) ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಶಶಿ ತರೂರ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.

ನಮ್ಮ ನಾಯಕ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸತ್ಯಸಂಧತೆ, ನ್ಯಾಯನಿಷ್ಠುರತೆ ಮತ್ತು ರಾಜಿ ಇಲ್ಲದ ಜನಪರ ಕಾಳಜಿಯ ಗುಣಗಳು ಖಂಡಿತ ಫಲ ನೀಡಲಿವೆ.‌ ನಿಮ್ಮ ಹೋರಾಟದ ಹಾದಿಯಲ್ಲಿ ಸದಾ ಹೆಜ್ಜೆ ಹಾಕುವ ಶಪಥದೊಂದಿಗೆ ನಿಮಗೆ ಹುಟ್ಟು ಹಬ್ಬದ ಪ್ರೀತಿಯ ಶುಭಾಶಯಗಳು ಎಂದು ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮಂದಿನ ವರ್ಷ ಸಂತಸದಿಂದ ಕೂಡಿರಲಿ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕರುಣಿಸಲಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕರುಣಿಸಲಿ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.

ಆರೋಗ್ಯ, ಸಂತಸ ಮತ್ತು ಯಶಸ್ಸಿಗಾಗಿ ಶುಭ ಹಾರೈಕೆಗಳು. ಪ್ರತಿಕೂಲ ಸಮಯದಲ್ಲಿ ಜನಸಾಮಾನ್ಯರ ಧ್ವನಿಯಾಗಿ ಅವರೊಂದಿಗೆ ನಿಂತು ಅವರ ಹಕ್ಕುಗಳಿಗಾಗಿ ಹೋರಾಡುವ ನಿಮ್ಮ ಕಾರ್ಯ ಮುಂದುವರಿಯಲಿ. ಹುಟ್ಟುಹಬ್ಬದ ಶುಭಾಶಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಕಾಂಗ್ರೆಸ್ ದೆಹಲಿ ಘಟಕವು ಸೇವಾ ದಿನವಾಗಿ ಆಚರಿಸುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು