ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವಾಹರಲಾಲ್‌ ನೆಹರೂ ಪುಣ್ಯತಿಥಿ: ಪ್ರಧಾನಿ ಮೋದಿ, ಸೋನಿಯಾ ಸೇರಿ ಗಣ್ಯರಿಂದ ನಮನ

ಅಕ್ಷರ ಗಾತ್ರ

ನವದೆಹಲಿ: ಇಂದು (ಶುಕ್ರವಾರ) ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 58ನೇ ಪುಣ್ಯತಿಥಿ. ಈ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕರ ಗಣ್ಯರು ನಮನ ಸಲ್ಲಿಸಿದ್ದಾರೆ.

ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದ್ದಾರೆ.

‘ಸ್ವಾತಂತ್ರ್ಯಕ್ಕಾಗಿ ಅಚಲವಾದ ಸಮರ್ಪಣೆ, ಉತ್ತಮ ನಾಳೆಗಾಗಿ ಅಪ್ರತಿಮ ದೃಷ್ಟಿ, ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯಲು ರಾಜಿಯಾಗದ ಮನೋಭಾವ. ಪಂ. ಜವಾಹರಲಾಲ್ ನೆಹರು ಅವರು ಇಂದಿಗೂ ಭಾರತವನ್ನು ಶ್ರೇಷ್ಠತೆಯತ್ತ ಮುನ್ನಡೆಸುತ್ತಿರುವ ನಾಯಕರಲ್ಲಿ ಒಬ್ಬರು’ ಎಂದು ಕಾಂಗ್ರೆಸ್‌ ಅಧಿಕೃತ ಟ್ವಿಟರ್‌ನಲ್ಲಿ ಹೇಳಿದೆ.

‘ನೆಹರು ಅವರ ಮನಸ್ಸಿನಲ್ಲಿ ಎರಡು ವಿಷಯಗಳಿದ್ದವು. ಒಂದು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಮತ್ತೊಂದು ನಮ್ಮ ಜನರ ಏಳಿಗೆ. ನಿರ್ಭೀತಿ ವ್ಯಕ್ತಿತ್ವ ಹೊಂದಿದ್ದ ನೆಹರೂ ಅವರು ಭಾರತದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಉತ್ಸಾಹದಿಂದ ಅವಿರತವಾಗಿ ಶ್ರಮಿಸಿದ್ದಾರೆ. ದೇಶಕ್ಕಾಗಿ ಅವರು ಕಂಡ ಕನಸುಗಳನ್ನು ನನಸಾಗಿಸಲು ಪಟ್ಟುಬಿಡದೆ ಶ್ರಮಿಸಿದ್ದಾರೆ’ ಎಂದು ಕಾಂಗ್ರೆಸ್ ಸ್ಮರಿಸಿದೆ.

‘ಜವಾಹರಲಾಲ್ ನೆಹರೂ ಅವರು ನಿಧನರಾಗಿ 58 ವರ್ಷಗಳು ಕಳೆದಿವೆ. ಆದರೆ, ಅವರ ರಾಜಕೀಯ ಆಲೋಚನೆಗಳು, ರಾಷ್ಟ್ರದ ಅಭಿವೃದ್ಧಿಗೆ ಹೊಂದಿದ್ದ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತ’ ಎಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

‘ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ನೆಹರೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯಭಾರತದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನೆಹರು ಅವರು 1964ರ ವರೆಗೂ ಅಧಿಕಾರದಲ್ಲಿದರು. ಅದೇ ವರ್ಷ ಮೇ 27ರಂದು ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT