ಭಾನುವಾರ, ಜೂನ್ 26, 2022
25 °C

ಕಾಂಗ್ರೆಸ್‌ ತೊರೆದ ಕಪಿಲ್‌ ಸಿಬಲ್‌: ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದ ನಾಯಕರು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಚ್ಚಿ: ‘ಕಪಿಲ್‌ ಸಿಬಲ್‌ ಅವರು ಪಕ್ಷ ತೊರೆದಿದ್ದರಿಂದ ಯಾವುದೇ ನಷ್ಟವುಂಟಾಗುವುದಿಲ್ಲ. ರಾಷ್ಟ್ರದ ರಾಜಕೀಯದಲ್ಲಿ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿದೆ. ವಿವಿಧ ರಾಜ್ಯಗಳಲ್ಲಿ ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರುವ ಅನೇಕ ನಾಯಕರ ಮೇಲೆ ಇದೇನೂ ಪರಿಣಾಮ ಬೀರುವುದಿಲ್ಲ’ ಎಂದು ಕಾಂಗ್ರೆಸ್‌ ಹೇಳಿದೆ.

‘ಸಿಬಲ್ ಅವರು ರಾಜೀನಾಮೆ ಪತ್ರದಲ್ಲಿ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಏನನ್ನೂ ಹೇಳಿಲ್ಲ, ಪಕ್ಷದಲ್ಲಿ ಅವಕಾಶ ಕಲ್ಪಿಸಲು ಯಾವುದೇ ಸ್ಥಾನಗಳಿಲ್ಲದ ಕಾರಣ ಸಿಬಲ್ ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ಕಾಂಗ್ರೆಸ್‌ ತೊರೆದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಓದಿ... ಕಾಂಗ್ರೆಸ್‌ ತೊರೆದ ಕಪಿಲ್‌ ಸಿಬಲ್‌: ಎಸ್‌ಪಿ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು