ಶುಕ್ರವಾರ, ನವೆಂಬರ್ 27, 2020
21 °C

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು: ಅಧ್ಯಕ್ಷ ಹುದ್ದೆಯಿಂದ ಬಿಡುಗಡೆಗೆ ಸೋನಿಯಾ ಮನವಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Congress Meeting

ನವದೆಹಲಿ: ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವಂತೆ ಸೋನಿಯಾ ಗಾಂಧಿ ಅವರು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಮನವಿ ಮಾಡಿದ್ದಾರೆ. ಆದರೆ, ಅಧ್ಯಕ್ಷ ಹುದ್ದೆಯಲ್ಲಿ ಸೋನಿಯಾ ಅವರೇ ಮುಂದುವರಿಯಬೇಕು ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಒತ್ತಾಯಿಸಿದ್ದಾರೆ.

ಆದರೆ, ಅದಕ್ಕೊಪ್ಪದ ಸೋನಿಯಾ ಗಾಂಧಿ, ಪಕ್ಷದ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧ್ಯಕ್ಷೆ ಹುದ್ದೆ ತ್ಯಜಿಸುವ ಪ್ರಸ್ತಾವ ಮಂಡಿಸುವ ಮುನ್ನ ಸೋನಿಯಾ ಅವರು ಗುಲಾಂ ನಬಿ ಆಜಾದ್ ಮತ್ತು ಇತರರ ಪತ್ರವನ್ನು ಉಲ್ಲೇಖಿಸಿದ್ದಾರೆ. ಭಿನ್ನಮತೀಯರು ಕಳುಹಿಸಿದ ಟಿಪ್ಪಣಿಗೆ ಉತ್ತರಿಸಿರುವ ಸೋನಿಯಾ, ಬಳಿಕ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಅದರಲ್ಲಿರುವ ವಿಷಯಗಳನ್ನು ಓದಲಾಗಿದೆ ಎಂದೂ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅಸಮಾಧಾನ: ಕೆಲವು ನಾಯಕರು ಪತ್ರ ಬರೆದಿರುವುದನ್ನು ಟೀಕಿಸಿದ ರಾಹುಲ್ ಗಾಂಧಿ, ಪತ್ರ ಬರೆದಿರುವ ಸಂದರ್ಭವನ್ನು ಪ್ರಶ್ನಿಸಿದ್ದಾರೆ. ಜತೆಗೆ, ಪಕ್ಷದ ಆಂತರಿಕ ವಿಷಯವನ್ನು ಬಹಿರಂಗಪಡಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಾರ್ಯಕಾರಿ ಸಮಿತಿ ಸಭೆ ಬೆಳಿಗ್ಗೆ 11 ಗಂಟೆಗೆ ಆರಂಭಗೊಂಡಿತ್ತು. ಮನಮೋಹನ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು