ನವದೆಹಲಿ: ಪಕ್ಷದ ನಾಯಕತ್ವದಲ್ಲಿ ಸುಧಾರಣೆಯಾಗಬೇಕು ಎಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವವರಿಗೆ ಬಿಜೆಪಿ ಸಹಕಾರವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಅದನ್ನು ಬರೆದಿರುವ ಸಂದರ್ಭದ ಬಗ್ಗೆಯೂ ಪ್ರಶ್ನಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಮಯದಲ್ಲಿ ಪತ್ರ ಬರೆಯಲಾಗಿದೆ. ಪತ್ರದಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಚರ್ಚಿಸಲು ಸರಿಯಾದ ವೇದಿಕೆ ಕಾರ್ಯಕಾರಿ ಸಮಿತಿ ಸಭೆಯೇ ಹೊರತು ಮಾಧ್ಯಮವಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು: ಅಧ್ಯಕ್ಷ ಹುದ್ದೆಯಿಂದ ಬಿಡುಗಡೆಗೆ ಸೋನಿಯಾ ಮನವಿ

ಕಪಿಲ್ ಸಿಬಲ್ ಅಸಮಾಧಾನ: ರಾಹುಲ್ ಗಾಂಧಿ ಹೇಳಿಕೆಗೆ ಕಪಿಲ್ ಸಿಬಲ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ‘ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ರಾಜಸ್ಥಾನ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಬಿಜೆಪಿಯನ್ನು ಮಣಿಸಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಪರ ಹೇಳಿಕೆ ನೀಡಿಲ್ಲ. ಆದಾಗ್ಯೂ, ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ!’ ಎಂದು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.