ಬುಧವಾರ, ಜೂನ್ 23, 2021
30 °C
ಸುದ್ದಿ ರೂಪದಲ್ಲಿ ಜಾಹೀರಾತು ನೀಡಿದ ಆರೋಪ

ಅಸ್ಸಾಂನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಎಫ್‌ಐಆರ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ‘ಜಾಹೀರಾತನ್ನು ಮರೆಮಾಚಿ ಸುದ್ದಿ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಹಾಗೂ ಎಂಟು ಪತ್ರಿಕೆಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಭಾನುವಾರ ರಾತ್ರಿ ಡಿಸ್ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.

‘ಮೊದಲ ಹಂತದಲ್ಲಿ ಚುನಾವಣೆ ನಡೆದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ‘ ಎಂಬ ಮಾಹಿತಿಯನ್ನು ಸುದ್ದಿರೂಪದಲ್ಲಿ ಪ್ರಕಟಿಸುವ ಮೂಲಕ ಬಿಜೆಪಿ ಮಾದರಿ ನೀತಿ ಸಂಹಿತೆ (ಎಂಸಿಸಿ), ಪ್ರಜಾ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿದೆ. ಹೀಗಾಗಿ ಈ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಎಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದರು.

‘ಇದು ಎಂಸಿಸಿ, ಪ್ರಜಾನಿಧಿ ಕಾಯ್ದೆ ಉಲ್ಲಂಘನೆಯಾಗಿದೆ. ಬಿಜೆಪಿಯವರು ತಾವು ಸೋಲುತ್ತೇವೆಂದು ಅರಿತುಕೊಂಡ ನಂತರ ಮತದಾರರ ಮೇಲೆ ಪ್ರಭಾವ ಬೀರಲು ಇಂಥ ಅಕ್ರಮ ಮತ್ತು ಅಸಾಂವಿಧಾನಿಕ ವಿಧಾನಗಳನ್ನು ಅನುಸರಿಸು ತ್ತಿದ್ದಾರೆ‘ ಎಂದು ಬೋರಾ ದೂರಿದ್ದಾರೆ.

‘ಎರಡು ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ವಂಚಿಸಲು ಮುಖ್ಯಮಂತ್ರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಮುಖಂಡರು ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಇಂಥ ಪೂರ್ವ ಯೋಜಿತ ಪಿತೂರಿಯಲ್ಲಿ ತೊಡಗಿದ್ದಾರೆ‘ ಎಂದು ಟೀಕಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು