ಶ್ರೀನಗರ (ಪಿಟಿಐ): ಪ್ರಜಾಪ್ರಭುತ್ವಕ್ಕಾಗಿ ಕೈಗೊಂಡಿರುವ ಹೋರಾಟದಲ್ಲಿ ವಿರೋಧ ಪಕ್ಷಗಳ ಜತೆಗೆ ಕಾಂಗ್ರೆಸ್ ದೊಡ್ಡಣ್ಣನ ಪಾತ್ರ ನಿರ್ವಹಿಸಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಒತ್ತಾಯಿಸಿದ್ದಾರೆ.
‘ದೇಶದ ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯಣ್ಣನಂತೆ ನಡೆದುಕೊಳ್ಳಬೇಕು. ಈ ಹಿಂದೆ ಅದರ ಮೈತ್ರಿ ಪಾಲುದಾರರಾಗಿರುವ ಇತರ ವಿರೋಧ ಪಕ್ಷಗಳಿಗೆ ಉಸಿರುಗಟ್ಟಿಸುವಂತಹ ಸನ್ನಿವೇಶ ಸೃಷ್ಟಿಸಬಾರದು. ಉಳಿದ ಪಕ್ಷಗಳನ್ನೂ ಈ ಹೋರಾಟದಲ್ಲಿ ಜತೆಗೂಡಿಸಿಕೊಳ್ಳಬೇಕು. ಜತೆಗೆ ಜವಾಬ್ದಾರಿಗಳನ್ನೂ ಹಂಚಿಕೆ ಮಾಡಬೇಕು’ ಎಂದು ಅವರು ಇಲ್ಲಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಪ್ರಸ್ತುತದ ಈ ಹೋರಾಟವು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ವಜಾಗೊಳಿಸಿರುವುದರ ವಿರುದ್ಧವಷ್ಟೆ ಅಲ್ಲದೇ, ದೇಶದ ಪ್ರಜಾಪ್ರಭುತ್ವದ ಉಳಿವೂ ಇದೆ. ದೇಶವು ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಗುತ್ತಿದೆ. ನ್ಯಾಯಾಂಗ, ಕಾರ್ಯಾಂಗ ಅಥವಾ ಮಾಧ್ಯಮ ಹೀಗೆ ಪ್ರಜಾಪ್ರಭುತ್ವದ ಎಲ್ಲ ಆಧಾರ ಸ್ತಂಭಗಳನ್ನು ಅಸ್ಥಿರಗೊಳಿಸಲಾಗಿದೆ’ ಎಂದು ಮೆಹಬೂಬಾ ದೂರಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.