ಶುಕ್ರವಾರ, ಆಗಸ್ಟ್ 19, 2022
21 °C

ಅಸ್ಸಾಂನಿಂದ ರಿಪುನ್, ಕೇರಳದಿಂದ ಜೆಬಿ ಮೆಥರ್ ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಸ್ಸಾಂನಿಂದ ರಿಪುನ್ ಬೋರಾ ಮತ್ತು ಕೇರಳದಿಂದ ಜೆಬಿ ಮೆಥರ್ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ.

ಬೋರಾ ಮತ್ತು ಮೆಥರ್ ಅವರನ್ನು ಅಭ್ಯರ್ಥಿಗಳನ್ನಾಗಿಸುವ ಪ್ರಸ್ತಾವಕ್ಕೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ರಾಜ್ಯಸಭೆಯ 13 ಸ್ಥಾನಗಳ ಭರ್ತಿಗೆ ಮಾರ್ಚ್ 31ರಂದು ಚುನಾವಣೆ ನಡೆಯಲಿದೆ.

ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ನಾಗಾಲ್ಯಾಂಡ್ ಹಾಗೂ ತ್ರಿಪುರಾದ ರಾಜ್ಯಸಭೆ ಸದಸ್ಯರು ಏಪ್ರಿಲ್ 12ರಂದು ನಿವೃತ್ತರಾಗಲಿದ್ದಾರೆ. ಪಂಜಾಬ್‌ನಿಂದ ಆಯ್ಕೆಯಾಗಿದ್ದ ಐವರು ಸದಸ್ಯರು ಏಪ್ರಿಲ್ 9ರಂದು ನಿವೃತ್ತರಾಗಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು