ಬುಧವಾರ, ನವೆಂಬರ್ 25, 2020
22 °C

ಮಾಸ್ಕ್ ಧರಿಸದವರಿಗೆ ₹2000 ದಂಡ: ದೆಹಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Delhi congress

ನವದೆಹಲಿ: ಮಾಸ್ಕ್ ಧರಿಸದವರಿಗೆ ₹2,000 ದಂಡ ವಿಧಿಸುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ನಿರ್ಧಾರವು ಭ್ರಷ್ಟಾಚಾರ ಹೆಚ್ಚಳಕ್ಕೆ ದಾರಿ ಮಾಡಿಕೊಡಲಿದ್ದು, ತಕ್ಷಣವೇ ಹಿಂಪಡೆಯಬೇಕು ಎಂದು ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ಅನಿಲ್ ಚೌಧರಿ ಆಗ್ರಹಿಸಿದ್ದಾರೆ.

‘ಈ ದಬ್ಬಾಳಿಕೆಯ ನಿರ್ಧಾರವು ಭ್ರಷ್ಟಾಚಾರ ಹೆಚ್ಚಲು ಕಾರಣವಾಗಲಿದೆ. ದಂಡ ಪಾವತಿಸುವವರು ಚೌಕಾಶಿ ಮಾಡಲಾರರು ಎಂಬುದನ್ನು ಯಾರು ಖಾತರಿಪಡಿಸುತ್ತಾರೆ? ಜನರಿಗೆ ಉದ್ಯೋಗವಿಲ್ಲದ ಈ ಸಂದರ್ಭದಲ್ಲಿ ವಿಧಿಸಲಾಗುತ್ತಿರುವ ಈ ದಂಡವು ಬಹುಶಃ ಅವರಿಗೆ (ಕೇಜ್ರಿವಾಲ್) ಜಾಹೀರಾತಿಗೆ ಹಣದ ಕೊರತೆ ಇರುವುದನ್ನು ಸೂಚಿಸುತ್ತದೆ’ ಎಂದು ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: 

‘₹100 ದಂಡ ವಿಧಿಸಿ ಮಾಸ್ಕ್‌ಗಳನ್ನು ವಿತರಿಸಬೇಕು. ತಾವು ತಪ್ಪೆಸಗಿದ್ದೇವೆ ಎಂಬುದನ್ನು ಜನರಿಗೆ ಅರಿವಾಗುವಂತೆ ಮಾಡಬೇಕು’ ಎಂದೂ ಅವರು ಹೇಳಿದ್ದಾರೆ.

‘ದೆಹಲಿಯಲ್ಲಿ ಸಾಕಷ್ಟು ಜನರು ಮಾಸ್ಕ್‌ಗಳನ್ನು ಧರಿಸುತ್ತಿದ್ದಾರೆ. ಆದರೆ ಕೆಲವರು ಇನ್ನೂ ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಮಾಸ್ಕ್‌ ಧರಿಸದವರಿಗೆ ವಿಧಿಸಲಾಗುವ ದಂಡವನ್ನು ₹ 500ರ ಬದಲು ₹ 2000ಕ್ಕೆ ಹೆಚ್ಚಿಸಲಾಗಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಘೋಷಿಸಿದ್ದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು