ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಹಿಜಾಬ್‌ ವಿಚಾರ: ಸಂಸತ್‌ನಲ್ಲಿ ಧ್ವನಿ ಎತ್ತಿದ ಕೇರಳ ಕಾಂಗ್ರೆಸ್ ಸಂಸದ

Last Updated 7 ಫೆಬ್ರುವರಿ 2022, 12:32 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ವ್ಯಾಪಕವಾಗಿ ಚರ್ಚೆಯಲ್ಲಿರುವ ಕರ್ನಾಟಕದ ಹಿಜಾಬ್ ವಿಚಾರವನ್ನು ಪ್ರತಿಪಕ್ಷಗಳು ಸಂಸತ್‌ನಲ್ಲಿ ಪ್ರಸ್ತಾಪಿಸಿದವು.

ಈ ಕುರಿತು ಸೋಮವಾರ ಸಂಸತ್‌ನಲ್ಲಿ ಮಾತನಾಡಿರುವ ಕೇರಳದ ಕಾಂಗ್ರೆಸ್‌ ಸಂಸದ ಟಿ.ಎನ್‌. ಪ್ರತಾಪನ್, ನಾವು ನಮ್ಮ ಭಾರತವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ ಎಂದು ಪ್ರಶ್ನಿಸಿದರು.

‘ಈ ದೇಶದ ವೈವಿಧ್ಯತೆಯನ್ನು ಕಳೆದುಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ವಿದ್ಯಾರ್ಥಿಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕಿದೆ. ಶಿಕ್ಷಣ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಪ್ರತಾಪನ್‌ ಒತ್ತಾಯಿಸಿದರು.

ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದರು.

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ವಿಚಾರ ಉಡುಪಿ ಹಾಗೂ ಕುಂದಾಪುರದಲ್ಲಿ ವರದಿಯಾಗಿತ್ತು. ಬಳಿಕ ರಾಜ್ಯದ ಹಲವು ಕಾಲೇಜುಗಳಲ್ಲೂ ಇದೇ ರೀತಿಯ ವಿದ್ಯಮಾನ ನಡೆದಿತ್ತು.

ಸದ್ಯ ಈ ವಿಚಾರವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT