ಬುಧವಾರ, ಫೆಬ್ರವರಿ 1, 2023
27 °C

ಚಳಿಗಾಲದ ಅಧಿವೇಶನ: ಡಿ.3ರಂದು ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಸಭೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್‌ ಡಿ.3ರಂದು ಸಭೆ ನಡೆಸಲಿದೆ. 

ಸಂಸತ್ತಿನ ಚಳಿಗಾಲದ ಅಧಿವೇಶನ ಡಿ.7 ರಿಂದ 29ರವರೆಗೆ ನಡೆಯಲಿದೆ. 

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಧಿವೇಶನದ ಕಾರ್ಯತಂತ್ರ ಮತ್ತು ಸಮಸ್ಯೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 

ಕಾಂಗ್ರೆಸ್ ಮತ್ತಿತರ ಪಕ್ಷಗಳು ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಸಜ್ಜಾಗಿವೆ.

ಡಿಸೆಂಬರ್‌ 6ರಂದು ಸರ್ವ ಪಕ್ಷಗಳ ಸಭೆ
ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಕೇಂದ್ರ ಸರ್ಕಾರವು ಡಿಸೆಂಬರ್‌ 6ರಂದು ಸರ್ವ ಪಕ್ಷಗಳ ಸಭೆ ಕರೆದಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಅವರು ಈ ಸಂಬಂಧ ಎಲ್ಲಾ ಪಕ್ಷಗಳ ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರಿಗೆ ಸಭೆಗೆ ಆಹ್ವಾನ ನೀಡಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು