ಭಾನುವಾರ, ನವೆಂಬರ್ 27, 2022
27 °C

ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ: ಸೆ.30ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ ಖಚಿತ

ಪಿಟಿಐ Updated:

ಅಕ್ಷರ ಗಾತ್ರ : | |

ನಚದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ (ಸೆಪ್ಟೆಂಬರ್‌ 30ರಂದು) ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಕೇರಳದ ತಿರುವನಂತಪುರ ಸಂಸದರಾಗಿರುವ ತರೂರ್‌, ನಾಮಪತ್ರ ಸಲ್ಲಿಸಿದ ಬಳಿಕ ದೆಹಲಿಯ ಲೋಧಿ ಎಸ್ಟೇಟ್‌ನಲ್ಲಿರುವ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ನಾಮಪತ್ರದ ಅರ್ಜಿ ಪಡೆದುಕೊಂಡಿರುವ ಸಿಂಗ್ ಕೂಡ ಶುಕ್ರವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್‌ ಪಕ್ಷದ ಪ್ರಕಟಣೆ ಪ್ರಕಾರ ಸೆಪ್ಟೆಂಬರ್‌ 24 ರಿಂದ 30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅಕ್ಟೋಬರ್‌ 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಿಂಪಡೆಯಲು ಅಕ್ಟೋಬರ್‌ 8 ಕೊನೇ ದಿನವಾಗಿದೆ. ಅದೇ ದಿನ (ಅ.8) ಸಂಜೆ 5ರ ವೇಳೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ.

ಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ಬಳಿಕ (19ರಂದು) ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಇವನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು