MCD Polls: ಮಾಲಿನ್ಯ ನಿಯಂತ್ರಣಕ್ಕೆ ಒತ್ತು ನೀಡಿದ ಕಾಂಗ್ರೆಸ್ ಪ್ರಣಾಳಿಕೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ಮಾಲಿನ್ಯ ನಿಯಂತ್ರಣ, ನಗರಪಾಲಿಕೆಯ ಆದಾಯ ದುಪ್ಪಟ್ಟುಗೊಳಿಸುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಿದೆ.
ಮೂರು ಲ್ಯಾಂಡ್‌ಫಿಲ್ ಪ್ರದೇಶಗಳ ತೆರವು ಮತ್ತು ತ್ಯಾಜ್ಯ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್ ರೂಪಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ.
ವಾಯು ಹಾಗೂ ಜಲ ಮಾಲಿನ್ಯ ನಿಯಂತ್ರಿಸುವುದು, ಕೋಮು ಸೌಹಾರ್ದತೆ ಕಾಪಾಡುವುದು ಮತ್ತು ಎಂಸಿಡಿ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲುದಾರಿಕೆಗೆ ಆದ್ಯತೆ ನೀಡಿದೆ.
ಇದನ್ನೂ ಓದಿ: ನ.20ಕ್ಕೆ ಭಾರತ್ ಜೋಡೊ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶ
ದೆಹಲಿ ಮಹಾನಗರ ಪಾಲಿಕೆ ನೌಕರರನ್ನು ಖಾಯಂಗೊಳಿಸುವುದು ಸೇರಿದಂತೆ ಹೊಸ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.