ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ವಿಚಾರಣೆ ವಿರೋಧಿಸಿ ರಸ್ತೆಯಲ್ಲೇ ಕುಳಿತರು, ಬ್ಯಾರಿಕೇಡ್ ಕಿತ್ತೆಸೆದರು

ರಾಹುಲ್‌ ಗಾಂಧಿ ವಿಚಾರಣೆ ಐದನೇ ದಿನಕ್ಕೆ
Last Updated 21 ಜೂನ್ 2022, 17:20 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇ.ಡಿ.)ವಿಚಾ ರಣೆಗೆ ಮಂಗಳವಾರ ಹಾಜರಾದರು.

ಕಳೆದ ನಾಲ್ಕು ದಿನಗಳಲ್ಲಿ ಇ.ಡಿ. ಅಧಿಕಾರಿಗಳು ರಾಹುಲ್‌ ಅವರನ್ನು 42 ಗಂಟೆ ವಿಚಾರಣೆ ನಡೆಸಿದ್ದರು. ಮಂಗಳವಾರ ಬೆಳಿಗ್ಗೆ 11.15ಕ್ಕೆ ಇ.ಡಿ. ಕಚೇರಿಗೆ ಬಂದ ಕಾಂಗ್ರೆಸ್‌ ನಾಯಕನ ವಿಚಾರಣೆ ರಾತ್ರಿ 8 ಗಂಟೆಯವರೆಗೆ ಮುಂದುವರಿಯಿತು. ಸುಮಾರು 9 ತಾಸು ವಿಚಾರಣೆ ನಡೆಯಿತು.

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಎಐಸಿಸಿ ಕಚೇರಿ ಎದುರು ಸತ್ಯಾಗ್ರಹ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಕಾರ್ಯ ಕರ್ತರನ್ನು ತಡೆಯಲು ಪೊಲೀಸರು ಬ್ಯಾರಿ ಕೇಡ್‌ಗಳನ್ನು ಹಾಕಿದರು. ಕೆಲವು ಬ್ಯಾರಿಕೇಡ್‌ಗಳ ಮೇಲೆ ಕಾರ್ಯಕರ್ತರು ಹತ್ತಿದರು. ಕೆಲವನ್ನು ಕಿತ್ತು ಎಸೆದರು. ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್‌ ಬಘೆಲ್‌ ಸೇರಿದಂತೆ ಹಲವು ಮುಖಂಡರು, ಕಾರ್ಯ ಕರ್ತರುರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಕಾಂಗ್ರೆಸ್‌ ಕಚೇರಿಯಿಂದ ಜಂತರ್‌ ಮಂತರ್‌ವರೆಗೆ ಪಾದಯಾತ್ರೆ ನಡೆಸಲು ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಅವಕಾಶ ನಿರಾಕರಿಸಿದರು.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹಲೋತ್‌,‘ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಅನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT