ಗುರುವಾರ , ಮೇ 26, 2022
29 °C
ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

ಫಲಿತಾಂಶ: ಕಾಂಗ್ರೆಸ್‌ ಮೇಲುಗೈ, 'ವೆಲ್‌ ಡನ್‌' ಎಂದ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ ಬೆನ್ನಲ್ಲೇ ಪಕ್ಷದ ಮುಖಂಡ ರಾಹುಲ್‌ ಗಾಂಧಿ 'ವೆಲ್‌ ಡನ್‌' ಎಂದು ಟ್ವೀಟ್‌ ಮಾಡಿ, ರಾಜ್ಯ ಕಾಂಗ್ರೆಸ್‌ ತಂಡವನ್ನು ಅಭಿನಂದಿಸಿದ್ದಾರೆ.

'ಬದಲಾವಣೆಯ ಗಾಳಿ ಬೀಸುತ್ತಿದೆ. ಎಂದಿನಂತೆ ಪ್ರಬಲವಾಗಿ ಮುಂದುವರಿಯುತ್ತೇವೆ. ಧನ್ಯವಾದಗಳು ರಾಹುಲ್‌ ಗಾಂಧಿ ಜೀ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕರ್ನಾಟಕದ ಜನತೆ ಬಿಜೆಪಿಗೆ ತೋರಿಸಿಕೊಟ್ಟಿದ್ದಾರೆ. ಈ ಫಲಿತಾಂಶವು ಜನ ವಿರೋಧಿಗಳಿಗೆ ಮತ್ತು ಭ್ರಷ್ಟ ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು