ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವವರು ಯಾರು? ಕೇಂದ್ರಕ್ಕೆ ಸುರ್ಜೇವಾಲಾ ಪ್ರಶ್ನೆ

Last Updated 20 ಸೆಪ್ಟೆಂಬರ್ 2020, 11:57 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸುಮಾರು 15.50 ಕೋಟಿ ರೈತರು ಉತ್ಪಾದಿಸುವ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವವರು ಯಾರು ಎಂದು ಕಾಂಗ್ರೆಸ್ ನಾಯಕ ರಣದೀಪ್‌ ಸುರ್ಜೇವಾಲಾ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಸುರ್ಜೆವಾಲಾ, ‘ಕೇಂದ್ರ ಸರ್ಕಾರವು ಇಂದು ಮೂರು ರೈತ ವಿರೋಧಿ ಕಾಯ್ದೆಗಳನ್ನು ಅಂಗೀಕರಿಸಲಿದೆ’ ಎಂದು ಬರೆದುಕೊಂಡಿದ್ದು, ಅದರೊಂದಿಗೆ ಕೆಲಪ್ರಶ್ನೆಗಳನ್ನೂ ಎತ್ತಿದ್ದಾರೆ. ‘15.50 ಕೋಟಿ ರೈತರಿಗೆ ಅವರ ಉತ್ಪನ್ನಗಳಿಗೆ ಯಾರು ಮತ್ತುಹೇಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಾರೆ?, ಸರ್ಕಾರವು ಎಂಎಸ್‌ಪಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹೊಣೆಗಾರಿಕೆ ನೀಡುವ ಬದಲು ಪಲಾಯನ ಮಾಡುತ್ತಿರುವುದೇಕೆ? ಮಾರುಕಟ್ಟೆಯಿಂದ ಹೊರಗೆ ಎಂಎಸ್‌ಪಿ ಗ್ಯಾರಂಟಿಯನ್ನು ಯಾರು ತೆಗೆದುಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನು ಅಲ್ಲಗಳೆದಿರುವಹರಿಯಾಣದ ಸಚಿವ ಅನಿಲ್‌ ವಿಜ್‌,ಎಂಎಸ್‌ಪಿಗೆ ಸಂಬಂಧಿಸಿದಂತೆ ಇರುವ ಕಳವಳವನ್ನು ಪರಿಹರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆಯಾದರೂ,ಕೃಷಿಗೆ ಸಂಬಂಧಿಸಿದಂತೆ ಅಂಗೀಕರಿಸಲಾಗಿರುವ ಮಸೂದೆಗಳ ವಿಚಾರವಾಗಿ ವಿರೋಧ ಪಕ್ಷಗಳುರೈತರನ್ನು ದಾರಿತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ.

‘ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ದಾರಿ ತಪ್ಪಿಸುತ್ತಿವೆ. ಕೃಷಿಗೆ ಸಂಬಂಧಿಸಿ ಮಸೂದೆಗಳು ರೈತರ ಪರವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ ಎಂಎಸ್‌ಪಿಯ ಭರವಸೆ ನೀಡಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ’ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ವಿರೋಧಿಸಬೇಕು ಎಂದು ಬಿಜೆಪಿಯೇತರ ಪಕ್ಷಗಳಿಗೆ ಕರೆ ನೀಡಿದ್ದರು.

‘ಇಂದು ದೇಶದ ರೈತರು ರಾಜ್ಯಸಭೆಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ಅಲ್ಪಮತವನ್ನು ಹೊಂದಿದೆ. ಕೃಷಿಗೆ ಸಂಬಂಧಿಸಿದ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಬೇಕು ಎಂದು ನಾನು ಎಲ್ಲ ಬಿಜೆಪಿಯೇತರ ಪಕ್ಷಗಳಿಗೆ ಮನವಿ ಮಾಡುತ್ತೇನೆ. ದೇಶದ ರೈತರು ಬಯಸುವುದೂ ಇದನ್ನೇ’ ಕೇಜ್ರಿವಾಲ್ ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT