ಶನಿವಾರ, ಮಾರ್ಚ್ 25, 2023
27 °C

ದೆಹಲಿ: ಬಂಧಿತ ಸಚಿವ ಸತ್ಯೇಂದ್ರ ಜೈನ್ ವಜಾಕ್ಕೆ ಕಾಂಗ್ರೆಸ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಜೈನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಬಂಧಿಸಿದ್ದರು.

ಮಾಧ್ಯಮದವರೊಂದಿಗೆ ಮಾತನಾಡಿರುವ ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅನಿಲ್‌ ಕುಮಾರ್‌, ನಿಷ್ಪಕ್ಷಪಾತವಾದ ತನಿಖೆ ಕೈಗೊಂಡರೆ, ಎಎಪಿಯ ಇನ್ನೂ ಹಲವು ಸಚಿವರು ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ.

'ಜೈನ್‌ ಅವರು ದೆಹಲಿ ಸಂಪುಟದಲ್ಲಿ ಸಚಿವರಾಗುವುದಕ್ಕೂ ಮೊದಲೇ, ಶೆಲ್‌ ಕಂಪೆನಿಗಳ ಪರವಾಗಿ ಹವಾಲಾ ವಹಿವಾಟು ನಡೆಸಿದ್ದರು ಮತ್ತು ದೆಹಲಿಯಲ್ಲಿ ಸುಮಾರು ₹ 27 ಕೋಟಿಗೂ ಅಧಿಕ ಮೌಲ್ಯದ ಕೃಷಿ ಭೂಮಿ ಖರೀದಿಸಿದ್ದರು. ಆದರೂ, ನಿಧಿ ಸಂಗ್ರಹಕಾರರನ್ನಾಗಿ ಬಳಸಿಕೊಳ್ಳುವ ಉದ್ದೇಶದಿಂದ ಅವರನ್ನು ಕೇಜ್ರಿವಾಲ್‌ ಸಚಿವರನ್ನಾಗಿ ಮಾಡಿದ್ದರು' ಎಂದು ಅನಿಲ್‌ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್‌ ಆದ್ಮಿ ಪಕ್ಷವು (ಎಎಪಿ), ಜೈನ್‌ ಬಂಧನದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಎಂಟು ವರ್ಷ ಹಳೆಯ ‘ಹುಸಿ’ ಪ್ರಕರಣದಲ್ಲಿ ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಲಾಗಿದೆ. ಸತ್ಯೇಂದ್ರ ಅವರು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದಾರೆ. ಅಲ್ಲಿ ಚುನಾವಣೆ ಸೋಲುವ ಭೀತಿಯಲ್ಲಿರುವ ಬಿಜೆಪಿ, ಹೀಗೆ ಮಾಡಿದೆ ಎಂದು ಆರೋಪಿಸಿದೆ.

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು