ಶನಿವಾರ, ಮಾರ್ಚ್ 25, 2023
27 °C

ಹಿಮಾಚಲ ಪ್ರದೇಶ ಚುನಾವಣೆಗೆ 46 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಘೋಷಣೆ ಮಾಡಿದೆ.

ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹರೋಲಿಯಿಂದ ಮುಖೇಶ್ ಅಗ್ನಿಹೋತ್ರಿ, ಡಾಲ್ಹೌಸಿಯಿಂದ ಆಶಾ ಕುಮಾರಿ, ನಾದೌನ್‌ನಿಂದ ಸುಖವಿಂದರ್ ಸುಖು ಸ್ಪರ್ಧಿಸಲಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆಗೆ ಅಕ್ಟೋಬರ್‌ 14ರಂದು ಚುನಾವಣೆ ಘೋಷಣೆಯಾಗಿತ್ತು. ಚುನಾವಣೆ ಘೋಷಣೆಯಾಗಿ ನಾಲ್ಕೇ ದಿನಗಳಲ್ಲೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್‌, ಎಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿದೆ.

ನವೆಂಬರ್ 12ರಂದು 68 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್‌ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಇದೇ 17ರಂದು ಅಧಿಸೂಚನೆ ಜಾರಿಗೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 25ರಂದು ಕಡೆಯ ದಿನ. 27ರಂದು ನಾಮಪತ್ರಗಳ ಪರಿಶೀಲನೆ. 29ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ.

ಇವುಗಳನ್ನೂ ಓದಿ‌

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು