ಶನಿವಾರ, ಜನವರಿ 28, 2023
16 °C

ಉಗ್ರವಾದಕ್ಕೆ ಕಾಂಗ್ರೆಸ್ ಇಬ್ಬರು ಪ್ರಧಾನಿಗಳನ್ನು ಕಳೆದುಕೊಂಡಿದೆ: ಖರ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್ : ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮತಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ತಿರುಗೇಟು ನೀಡಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ಇಬ್ಬರು ಪ್ರಧಾನಿಗಳನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. 

‘ಭಯೋತ್ಪಾದಕರ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ದೇಶದಲ್ಲಿ ಶಾಂತಿ ನೆಲೆಸಲು ನಮ್ಮ ನಾಯಕರೇ ಜೀವ ತ್ಯಾಗ ಮಾಡಿದ್ದಾರೆ. ಇಂದಿರಾಗಾಂಧಿ ಅವರು ದೇಶವನ್ನು ಒಗ್ಗೂಡಿಸಲು ತಮ್ಮ ಜೀವವನ್ನು ಬಲಿಕೊಟ್ಟಿದ್ದಾರೆ. ರಾಜೀವ್‌ಗಾಂಧಿ ಅವರು ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಬಿಜೆಪಿಯ ಯಾವುದಾದರೂ ನಾಯಕರು ಕನಿಷ್ಠ ಪಕ್ಷ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದರೇ’ ಎಂದೂ ಖರ್ಗೆ
ಪ್ರಶ್ನಿಸಿದ್ದಾರೆ. 

‘ಇಲ್ಲಿ ನಡೆಯುತ್ತಿರುವುದು ವಿಧಾನಸಭಾ ಚುನಾವಣೆಯೇ ಹೊರತು ಲೋಕಸಭೆ ಚುನಾವಣೆಯಲ್ಲ. ರಾಜ್ಯದ ಮೇಲೆ ಪರಿಣಾಮ ಬೀರುವ ವಿಷಯಗಳು ಇಲ್ಲಿ ಮುಖ್ಯ. ಪ್ರಧಾನಿಯವರು ರಾಜ್ಯ ಸರ್ಕಾರದ ಯಶಸ್ಸು ಹಾಗೂ ವೈಫಲ್ಯಗಳ ಬಗ್ಗೆ ಮಾತನಾಡುವುದು ಒಳಿತು’ ಎಂದು ಖರ್ಗೆ ಸಲಹೆ ನೀಡಿದ್ದಾರೆ. 

‘ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಭರವಸೆ ನೀಡಿರುವ ಬಿಜೆಪಿ, ಸಮಾಜವನ್ನು ವಿಭಜಿಸಿ ಮತದಾರರಲ್ಲಿ ಗೊಂದಲ ಹುಟ್ಟುಹಾಕಲು ಮುಂದಾಗಿದೆ. ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಾಯಕರನ್ನು ಈ ಬಗ್ಗೆ ಮಾತನಾಡುವಂತೆ ಪ್ರಚೋದಿಸಲು ಯತ್ನಿಸುತ್ತಿದೆ. ಅದರೆ ನಾವು ಇಂತಹ ತಂತ್ರಕ್ಕೆ ಬಲಿಯಾಗುವುದಿಲ್ಲ’ ಎಂದು ಖರ್ಗೆ ಅವರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು