ಸೋಮವಾರ, ಸೆಪ್ಟೆಂಬರ್ 20, 2021
29 °C

ಅಫ್ಗಾನಿಸ್ತಾನದಲ್ಲಿರುವ ಭಾರತೀಯರ ಕರೆತರಲು ಯೋಜನೆ ರೂಪಿಸದ ಸರ್ಕಾರ: ಕಾಂಗ್ರೆಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಫ್ಗಾನಿಸ್ತಾನದಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲು ಕೇಂದ್ರ ಸರ್ಕಾರ ಯಾವುದೇ ರೀತಿ ಯೋಜನೆ ರೂಪಿಸಿಲ್ಲ. ಈ ಮೂಲಕ ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಮೋದಿ ಸರ್ಕಾರ ಮೊದಲು ನಿದ್ರೆಯಿಂದ ಎಚ್ಚೆತ್ತುಕೊಂಡು, ಭಾರತೀಯರ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದೆ.

‘ಭಾರತದ ಹಿತಾಸಕ್ತಿ ಕಾಪಾಡುವ ನಿಲುವುಗಳಿಗೆ ಕಾಂಗ್ರೆಸ್‌ ಬೆಂಬಲವಾಗಿ ನಿಲ್ಲುತ್ತದೆ. ಇದಕ್ಕಾಗಿ ಪ್ರಬುದ್ಧ ರಾಜಕೀಯ ಮತ್ತು ರಾಜತಾಂತ್ರಿಕ ಪ್ರತಿಕ್ರಿಯೆಯನ್ನು ಸರ್ಕಾರದಿಂದ ನಿರೀಕ್ಷಿಸುತ್ತೇವೆ. ಆದರೆ, ನರೇಂದ್ರ ಮೋದಿ ನೇತೃತ್ವ ಸರ್ಕಾರ ಮೌನವಹಿಸಿದೆ’ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಸೋಮವಾರ ಹೇಳಿದ್ದಾರೆ.

‘ಅಫ್ಗಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಭಾರತದ ಹಿತಾಸಕ್ತಿಗಳಿಗೂ ಧಕ್ಕೆಯಾಗಲಿವೆ. ನಮ್ಮ ರಾಯಭಾರ ಕಚೇರಿ ಮತ್ತು ಅಲ್ಲಿನ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯೂ ಅಪಾಯದಲ್ಲಿದೆ. ಮೋದಿ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಅಫ್ಗಾನಿಸ್ತಾನದಲ್ಲಿನ ಭಾರತೀಯರನ್ನು ರಕ್ಷಿಸಲು ಮುಂದಾಗಬೇಕು’ ಎಂದು ಹೇಳಿದ್ದಾರೆ.

ಇವನ್ನೂ ಓದಿ

​* 
​* 
​* 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು