ರೈತರ ಆದಾಯ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ರೈತರ ಆದಾಯವನ್ನು ದ್ವಿಗುಣ ಮಾಡುವುದಾಗಿ ನೀಡಿರುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, 2004ರ ನಂತರ ರೈತರ ಆದಾಯದ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದೆ.
‘ಬಿಜೆಪಿಯ ಈ ಭರವಸೆಯು ಕಟ್ಟುಕತೆಯಾಗಿದೆ. ಎನ್‌ಡಿಎ ಅಧಿಕಾರಕ್ಕೇರಿದ ಬಳಿಕ ರೈತರ ಆದಾಯ ಕುಸಿದಿದೆ’ ಎಂದು ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಹೇಳಿದೆ.
‘ರೈತರ ಆದಾಯ ದ್ವಿಗುಣಗೊಳಿಸುವುದಾಗಿ 2016ರ ಫೆಬ್ರುವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಹಣದುಬ್ಬರವನ್ನು ಗಣನೆಗೆ ತೆಗೆದುಕೊಂಡರೆ ಕೆಲ ವರ್ಷಗಳಿಂದ ರೈತರ ಆದಾಯ ಕುಸಿಯುತ್ತಿದೆ’ ಎಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುಖಪಾಲ್ ಸಿಂಗ್ ಖೈರಾ ತಿಳಿಸಿದ್ದಾರೆ.
2004ರಿಂದ 2014ರ ನಡುವೆ ಹೋಲಿಕೆ ಮಾಡಿ ನೋಡಿದರೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಆದಾಯ ದ್ವಿಗುಣಗೊಂಡಿತ್ತು ಎಂದು 2018ರ ರಾಷ್ಟ್ರೀಯ ಮಾದರಿ ಸಮೀಕ್ಷೆಯನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.