ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಕಾಂಗ್ರೆಸ್‌ ವಕ್ತಾರೆ ದೀಪಿಕಾ ಪುಷ್ಕರ್‌ ರಾಜೀನಾಮೆ

Last Updated 18 ಜನವರಿ 2023, 8:59 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ ವಕ್ತಾರೆ ದೀಪಿಕಾ ಪುಷ್ಕರ್‌ ನಾಥ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆ ಜಮ್ಮು ಮತ್ತು ಕಾಶ್ಮೀರಕ್ಕೆ ಬರುವ ಮುನ್ನವೇ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಸಮರ್ಥನೆ ಮಾಡಿಕೊಂಡಿದ್ದ ಲಾಲ್‌ ಸಿಂಗ್‌ ಅವರಿಗೆ ಭಾರತ್‌ ಜೋಡೊ ಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಿರುವುದನ್ನು ಖಂಡಿಸಿ, ಸೈದ್ಧಾಂತಿಕ ನೆಲೆಗಟ್ಟಿನ ಹಿನ್ನೆಲೆಯಲ್ಲಿ ಪಕ್ಷವನ್ನು ಬಿಡುತ್ತಿರುವುದಾಗಿ ಹೇಳಿದ್ದಾರೆ.

8 ವರ್ಷದ ಅಲೆಮಾರಿ ಬಾಲಕಿಯ ಮೇಲೆ ಕಥುವಾದಲ್ಲಿ ಅತ್ಯಾಚಾರ ನಡೆದಿತ್ತು. ಇದನ್ನು ಲಾಲ್‌ ಸಿಂಗ್‌ ಸಮರ್ಥಿಸಿಕೊಂಡಿದ್ದರು.

ಅತ್ಯಾಚಾರ ಆರೋಪಿಗಳನ್ನು ರಕ್ಷಿಸುವ ಮೂಲಕ ಲಾಲ್‌ ಸಿಂಗ್‌ ಇಡೀ ಕಾಶ್ಮೀರವನ್ನು ಇಬ್ಬಾಗ ಮಾಡಿದ್ದರು. ಸೈದ್ದಾಂತಿಕವಾಗಿ ಅವರು ಜೋಡೊ ಯಾತ್ರೆಯಲ್ಲಿ ಭಾಗವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಲಾಲ್‌ ಸಿಂಗ್‌ ಅವರು ಎರಡು ಸಲ ಸಂಸದರಾಗಿ, ಮೂರು ಸಲ ಶಾಸಕರರಾಗಿ ಆಯ್ಕೆಯಾಗಿದ್ದರು. ಪಿಡಿಪಿ–ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಅವರು ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT