ಶನಿವಾರ, ಮೇ 28, 2022
31 °C

ದುರಂತದ ಸಮಯದಲ್ಲಿ ಉತ್ತರಾಖಂಡದೊಂದಿಗೆ ಕಾಂಗ್ರೆಸ್ ನಿಲ್ಲಲಿದೆ: ಸೋನಿಯಾ ಗಾಂಧಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿರುವ ಹಿಮಪಾತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಗೆ ನೆರವಾಗಬೇಕು ಎಂದು ಕರೆ ನೀಡಿದ್ದಾರೆ.

‘ಉತ್ತರಾಖಂಡದಲ್ಲಿ ಉಂಟಾಗಿರುವ ಹಿಮಸ್ಫೋಟ, ಪ್ರವಾಹದ ಆಘಾತಕಾರಿ ಸುದ್ದಿಯಿಂದ ಆತಂಕಗೊಂಡಿದ್ದೇನೆ. ಗಂಗಾನದಿ ಜಲಾನಯನ ಪ್ರದೇಶದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ‘ನಾನು ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಜನರು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗೆ ನೆರವಾಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು, ಸ್ವಯಂ ಸೇವಕರಲ್ಲಿ ಮನವಿ ಮಾಡುತ್ತೇನೆ. ಕಾಂಗ್ರೆಸ್‌ ಪಕ್ಷವು ಇಂತಹ ದುರಂತ ಮತ್ತು ಸಂಕಷ್ಟದ ಸಂದರ್ಭದಲ್ಲಿ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ’ ಎಂದೂ ತಿಳಿಸಿದ್ದಾರೆ.

ಇದೇವೇಳೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಇಡೀ ದೇಶವೇ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ ಎಂದು ಹೇಳಿದ್ದಾರೆ.

‘ಉತ್ತರಾಖಂಡದಲ್ಲಿ ಹಿಮಸ್ಫೋಟದಿಂದಾಗಿ ಉಂಟಾಗಿರುವ ದುರಂತವು ತುಂಬಾ ದುಃಖದ ಸಂಗತಿ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ದೇಶ ಉತ್ತರಾಖಂಡ ಜನರೊಂದಿಗೆ ಇರಲಿದೆ. ನಾನು ಅಪಾಯಕ್ಕೆ ಸಿಲುಕಿರುವರಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಾಂಗ್ರೆಸ್‌ನ ಎಲ್ಲ ಕಾರ್ಯರ್ತರು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಮನವಿ ಮಾಡುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು