ಶನಿವಾರ, ಜೂನ್ 12, 2021
22 °C

ರಸಗೊಬ್ಬರ ದರ ಹೆಚ್ಚಳ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಈಗಾಗಲೇ ಮೂರು ಕೃಷಿ ಕಾನೂನುಗಳನ್ನು ತಂದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಕೇಂದ್ರ ಸರ್ಕಾರ, ಇದೀಗ ರಸಗೊಬ್ಬರಗಳ ಬೆಲೆ ಏರಿಕೆ ಮೂಲಕ ರೈತರ ಮೇಲೆ ಮತ್ತೊಂದು ಪ್ರಹಾರ ಮಾಡಿದೆ ಎಂದು ಬುಧವಾರ ಕಾಂಗ್ರೆಸ್‌ ದೂರಿದೆ.

‘ಮೋದಿ ಸರ್ಕಾರವು ಜಿಎಸ್‌ಟಿ, ಪೆಟ್ರೋಲ್‌, ಡೀಸೆಲ್‌ ಮತ್ತು ರಸಗೊಬ್ಬರ ಬೆಲೆಗಳನ್ನು ಹೆಚ್ಚಿಸಿದೆ. ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಮೋದಿ ಸ್ನೇಹಿತರ ಆದಾಯವನ್ನು ಈ ಮೂಲಕ ಹೆಚ್ಚಿಸಿ, ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಅಲ್ಲದೆ ಕೃಷಿ ಸಬ್ಸಿಡಿ, ರೈತರ ಆದಾಯ ಮತ್ತು ಕೇಂದ್ರ ಸರ್ಕಾರದ ಘನತೆಯನ್ನು ಕುಂದಿಸಲಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಾಗ್ದಾಳಿ ಮಾಡಿದ್ದಾರೆ.

‘ದೇಶದ ಕೃಷಿಯನ್ನು ನಾಶ ಮಾಡಿ, ಅದನ್ನು ಕಾರ್ಪೊರೇಟ್‌ ವಲಯದ ಸ್ನೇಹಿತರಿಗೆ ಹಸ್ತಾಂತರಿಸಲು ಕೇಂದ್ರ ಯೋಜಿಸುತ್ತಿದೆ’ ಎಂದು ಕಾಂಗ್ರೆಸ್‌ ಆರೋಪಿಸಿದೆ.

‘ಮೋದಿ ಸರ್ಕಾರವು ರೈತ ವಿರೋಧಿಯಾಗಿದ್ದು, ಡಿಎಪಿ ಮತ್ತು ಇತರ ರಸಗೊಬ್ಬರ ದರಗಳನ್ನು ಏರಿಸಿದೆ. ಇದರಿಂದ ದೇಶದ ರೈತರಿಗೆ ಹೆಚ್ಚುವರಿಯಾಗಿ ₹ 20,000 ಕೋಟಿ ಹೊರೆ ಬೀಳಲಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸುದ್ದಿಗಾರರಿಗೆ ತಿಳಿಸಿದರು.

‘50 ಕೆ.ಜಿ ಡಿಎಪಿ ಗೊಬ್ಬರದ ಬೆಲೆಯನ್ನು ₹ 1,200ರಿಂದ ₹ 1,900ಕ್ಕೆ ಏರಿಸಲಾಗಿದೆ’ ಎಂದು ದೂರಿದ ಅವರು, ರಸಗೊಬ್ಬರಗಳ ಬೆಲೆ ಹೆಚ್ಚಳವನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕೃಷಿ ಉಪಕರಣಗಳ ಮೇಲೂ ಸರ್ಕಾರ ಜಿಎಸ್‌ಟಿ ವಿಧಿಸಿದೆ ಎಂದೂ ಅವರು ದೂರಿದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು