ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಸ್ಥಾನದಿಂದ ಅಧೀರ್ ರಂಜನ್ ಹೊರಗೆ?

ಜು.14ಕ್ಕೆ ಸಭೆ
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಜೋರಾಗಿದೆ. ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಅಧೀರ್‌ ರಂಜನ್‌ ಚೌಧರಿ ಅವರ ಸ್ಥಾನಕ್ಕೆ ಹೊಸಬರನ್ನು ಕಾಂಗ್ರೆಸ್‌ ಆಯ್ಕೆ ಮಾಡುವ ಸಾಧ್ಯತೆ ಇರುವುದಾಗಿ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 14ರಂದು ಸಂಸತ್‌ ಕಾರ್ಯ ಯೋಜನಾ ತಂಡದ ಸಭೆ ಕರೆದಿದ್ದಾರೆ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಬದಲಾವಣೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಲೋಕಸಭೆಯಲ್ಲಿ ಪಕ್ಷದ ನಾಯಕನ ಆಯ್ಕೆಗೆ ಶಶಿ ತರೂರ್‌, ಮನೀಶ್ ತಿವಾರಿ ಹಾಗೂ ಗೌರವ್‌ ಗೊಗೊಯಿ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆ ಇರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

2019ರಿಂದ ಅಧೀರ್ ರಂಜನ್‌ ಚೌಧರಿ ಅವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಹೊಣೆ ನಿರ್ವಹಿಸುತ್ತಿದ್ದಾರೆ. ಅಧೀರ್ ರಂಜನ್‌ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದು, ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ದೂಳೀಪಟವಾಗಿದೆ. ಇದೂ ಸಹ ಹೈಕಮಾಂಡ್‌ನ ನಿರ್ಧಾರಗಳಲ್ಲಿ ನಿರ್ಣಾಯಕ ಅಂಶವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

2024ರ ಲೋಕಸಭಾ ಚುನಾವಣೆಗಾಗಿ ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಅಧೀರ ರಂಜನ್‌ ಗಮನ ಹರಿಸಲಿ ಎಂಬ ಇಚ್ಛೆಯನ್ನು ಪಕ್ಷದ ಹೈಕಮಾಂಡ್‌ ಹೊಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT