ಭಾನುವಾರ, ಜುಲೈ 3, 2022
25 °C

ಉತ್ತರಾಖಂಡ: ಸಿ.ಎಂ ಅಭ್ಯರ್ಥಿ ಘೋಷಿಸಲು ಸೋನಿಯಾ ಗಾಂಧಿಗೆ ಮನವಿ -ಹರೀಶ್ ರಾವತ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕಾಶಿಪುರ (ಉತ್ತರಾಖಂಡ): ಉತ್ತರಾಖಂಡದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಸಿಎಂ ಹರೀಶ್‌ ರಾವತ್‌ ಅವರು, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ‘ಎಎನ್‌ಐ’ ಜತೆ ಮಾತನಾಡಿರುವ ಅವರು, ‘ಜನರು ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಇದರಿಂದಾಗಿ ಬಿಜೆಪಿಯವರು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿಗೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ’ ಎಂದಿದ್ದಾರೆ.

‘ಸಿ.ಎಂ ಅಭ್ಯರ್ಥಿಯನ್ನು ಘೋಷಿಸುವಂತೆ ನಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡುತ್ತೇವೆ. ಜನರು ಬಯಸುತ್ತಿರುವ ವ್ಯಕ್ತಿಯೇ ಮುಖ್ಯಮಂತ್ರಿಯಾಗಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮ್ಮ ಹೆಸರು ಘೋಷಿಸಿದರೆ ಪಕ್ಷದಲ್ಲಿ ಯಾರಿಂದಲೂ ಆಕ್ಷೇಪವಿರುವುದಿಲ್ಲ ಎಂದು ರಾವತ್ ಈ ಹಿಂದೆ ಹೇಳಿಕೊಂಡಿದ್ದರು.

ಉತ್ತರಾಖಂಡ ವಿಧಾನಸಭೆಯ 70 ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಓದಿ...  ತೃತೀ‌ಯ ರಂಗ ರಚನೆ: ಇಂದು ಮುಂಬೈಯಲ್ಲಿ ಠಾಕ್ರೆ, ಪವಾರ್‌ ಭೇಟಿಯಾಗಲಿರುವ ಕೆಸಿಆರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು