ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ: ಶೇ 40ಷ್ಟು ಮಹಿಳಾ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್‌

ಪ್ರಿಯಾಂಕಾ ಗಾಂಧಿ ಭರವಸೆ
Last Updated 19 ಅಕ್ಟೋಬರ್ 2021, 10:33 IST
ಅಕ್ಷರ ಗಾತ್ರ

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಶೇ 40ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜಕೀಯದಲ್ಲಿ ಮಹಿಳೆಯರು ಪರಿಪೂರ್ಣವಾಗಿ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ‘ ಎಂದು ಹೇಳಿದರು.

‘ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತಾಡಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಸ್ಥಾನಗಳಲ್ಲಿ ಶೇ 40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲುಕಾಂಗ್ರೆಸ್ ಪಕ್ಷ ನಿರ್ಧರಿಸಿದೆ‘ ಎಂದು ಪ್ರಿಯಾಂಕಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT