ಶುಕ್ರವಾರ, ಸೆಪ್ಟೆಂಬರ್ 17, 2021
29 °C

‘ಬಿಜೆಪಿ ಗದ್ದೀ ಛೋಡೋ’ ಎಂಬ ಅಭಿಯಾನ ನಡೆಸಲು ಸಿದ್ದವಾದ ಕಾಂಗ್ರೆಸ್

ಪಿಟಿಐ Updated:

ಅಕ್ಷರ ಗಾತ್ರ : | |

ಲಕ್ನೋ; ಉತ್ತರ ಪ್ರದೇಶ ಸರ್ಕಾರದ ವಿರುದ್ಧ 'ಬಿಜೆಪಿ ಗದ್ದೀ ಛೋಡೋ' (ಅಧಿಕಾರ ಬಿಡಿ) ಎಂಬ ಅಭಿಯಾನವನ್ನು ಆಗಸ್ಟ್ 9 ಮತ್ತು 10 ರಂದು ರಾಜ್ಯಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದೆ.

‘ಬಿಜೆಪಿ ಗದ್ದೀ ಛೋಡೋ ಅಭಿಯಾನದ ಪ್ರಯುಕ್ತ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ‌ ನೇತೃತ್ವವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ವಹಿಸಿಕೊಳ್ಳಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.

‘ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಎಲ್ಲ ಸಮುದಾಯಗಳು ಬಿಜೆಪಿ ಸರ್ಕಾರದ ಆಡಳಿತ ಕಂಡು ತೀವ್ರ ನಿರಾಸೆಯಾಗಿವೆ. ಎಲ್ಲೆಡೆಯೂ ಜಂಗಲ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಲಲ್ಲು ಹೇಳಿದರು.

ಮುಂದಿನ ವರ್ಷ ಪೆಬ್ರವರಿ ಅಥವಾ ಮಾರ್ಚ್‌ನಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಪಂಜಾಬ್ ಸಿಎಂ ಅಮರಿಂದರ್ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು