ಗುರುವಾರ , ಜುಲೈ 29, 2021
27 °C

ಬೆಲೆ ಏರಿಕೆ ವಿರೋಧಿಸಿ ಜುಲೈ 7ರಿಂದ ಕಾಂಗ್ರೆಸ್‌ ರಾಷ್ಟ್ರವ್ಯಾಪಿ ಅಭಿಯಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಣದುಬ್ಬರ, ಇಂಧನ ದರ ಏರಿಕೆ ವಿರುದ್ಧ ಜುಲೈ 7ರಿಂದ 17ರ ವರೆಗೆ ದೇಶವ್ಯಾಪಿ ಅಭಿಯಾನ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕಗಳ ಉಸ್ತುವಾರಿಗಳ ಜತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ಓದಿ: 

ಹಣದುಬ್ಬರ, ಇಂಧನ ದರ ಏರಿಕೆ, ಧಾನ್ಯಗಳು, ಖಾದ್ಯ ತೈಲ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ಸೇರಿದಂತೆ ತುರ್ತು ಆದ್ಯತೆ ನೀಡಬೇಕಿರುವ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 2ರ ನಂತರ 29 ಬಾರಿ ಇಂಧನ ದರ ಹೆಚ್ಚಿಸಲಾಗಿದೆ. 150ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ₹100 ದಾಟಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದ ಮೂಲಕ ಬಿಜೆಪಿ ಸರ್ಕಾರವು ಕಳೆದ ಏಳು ವರ್ಷಗಳಲ್ಲಿ ₹22 ಲಕ್ಷ ಕೋಟಿ ಗಳಿಸಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಓದಿ: 

ಖಾದ್ಯ ತೈಲ ಬೆಲೆಯೂ ಕಳೆದ ಆರು ತಿಂಗಳುಗಳಲ್ಲಿ ದುಪ್ಪಟ್ಟಾಗಿದೆ. ಧಾನ್ಯಗಳ ಬೆಲೆಯೂ ಹೆಚ್ಚಾಗಿದೆ. 2021ರ ಮೇ ತಿಂಗಳಲ್ಲಿ ಸಗಟು ಮಾರಾಟ ಸೂಚ್ಯಂಕ ಹೆಚ್ಚಳ ಪ್ರಮಾಣವು ಶೇ 12.94ರಷ್ಟಿದ್ದು, ಇದು 11 ವರ್ಷಗಳಲ್ಲೇ ಗರಿಷ್ಠ ಪ್ರಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ, ಉದ್ಯೋಗ ನಷ್ಟ, ವೇತನ ಕಡಿತದಿಂದ ಈಗಾಗಲೇ ಸಂಕಷ್ಟಕ್ಕೀಡಾಗಿರುವ ಜನತೆ ಮತ್ತಷ್ಟು ತೊಂದರೆಗೆ ಒಳಗಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ದೇಶವ್ಯಾಪಿ ಅಭಿಯಾನ ನಡೆಸಲಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು