ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಗಾಸಸ್‌: ತನಿಖೆಗೆ ತಜ್ಞರ ಸಮಿತಿ ರಚನೆ- ಸುಪ್ರೀಂ ಆದೇಶ ಸ್ವಾಗತಿಸಿದ ಕಾಂಗ್ರೆಸ್‌

Last Updated 27 ಅಕ್ಟೋಬರ್ 2021, 8:14 IST
ಅಕ್ಷರ ಗಾತ್ರ

ನವದೆಹಲಿ: ಪೆಗಾಸಸ್ ಕುತಂತ್ರಾಂಶ ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸುವ ಸುಪ್ರೀಂ ಕೋರ್ಟ್‌ ಆದೇಶವನ್ನು ಕಾಂಗ್ರೆಸ್‌ ಬುಧವಾರ ಸ್ವಾಗತಿಸಿದೆ.

ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನುಣುಚಿಕೊಳ್ಳುವ ಮತ್ತು ಗಮನವನ್ನು ಬೇರೆಡೆಗೆ ಸೆಳೆಯುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನ್ಯಾಯಾಲಯ ಈ ಮೂಲಕ ನಿರಾಕರಿಸಿದೆ ಎಂದು ಅದು ಹೇಳಿದೆ.

‘ಹುಸಿ-ರಾಷ್ಟ್ರೀಯತೆಯು ಎಲ್ಲೆಡೆ ಫ್ಯಾಸಿಸ್ಟ್‌ ಹೇಡಿಗಳ ಕೊನೆಯ ಆಶ್ರಯವಾಗಿದೆ’ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ.

‘ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ನುಣುಚಿಕೊಳ್ಳಲು, ತಪ್ಪಿಸಿಕೊಳ್ಳಲು ಮತ್ತು ಗಮನವನ್ನು ಬೇರೆಡೆ ಸೆಳೆಯಲು ಮೋದಿ ಸರ್ಕಾರ ನಡೆಸಿದ ಪ್ರಯತ್ನಗಳ ಹೊರತಾಗಿಯೂ, ಪೆಗಾಸಸ್‌ ದುರ್ಬಳಕೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ತಜ್ಞರ ಸಮಿತಿ ರಚನೆಗೆ ಹೊರಡಿಸಿರುವ ಆದೇಶವನ್ನು ಸ್ವಾಗತಿಸುತ್ತೇವೆ. ಸತ್ಯಮೇವ ಜಯತೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT