ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಧು ನೇತೃತ್ವದಲ್ಲಿ ಪಂಜಾಬ್ ಚುನಾವಣೆ ಎದುರಿಸಲಿದ್ದೇವೆ: ಕಾಂಗ್ರೆಸ್‌ ನಾಯಕ ರಾವತ್

Last Updated 20 ಸೆಪ್ಟೆಂಬರ್ 2021, 5:15 IST
ಅಕ್ಷರ ಗಾತ್ರ

ಚಂಡಿಗಡ: ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು, 'ನವಜೋತ್ ಸಿಂಗ್ ಸಿಧು ಜನಪ್ರಿಯ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲಿ ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್‌ ಎದುರಿಸಲಿದೆ. ಈ ವಿಚಾರದ ಕುರಿತ ನಿರ್ಧಾರವನ್ನು ಕಾಂಗ್ರೆಸ್‌ನ ರಾಷ್ಟ್ರ ಘಟಕದ ಅಧ್ಯಕ್ಷರು ಕೈಗೊಳ್ಳಲಿದ್ದಾರೆ' ಎಂದು ತಿಳಿಸಿದ್ದಾರೆ.

'ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ನಿರ್ಧಾರವನ್ನು ನಿನ್ನೆಯಷ್ಟೆ(ಭಾನುವಾರ) ತೆಗೆದುಕೊಳ್ಳಲಾಗಿದೆ. ಇದು ಒಮ್ಮತದಿಂದ ಕೂಡಿದ ತೀರ್ಮಾನವಾಗಿದ್ದು, ಪೂರ್ವ ನಿಯೋಜಿತವಾಗಿರಲಿಲ್ಲ' ಎಂದೂ ರಾವತ್‌ ಹೇಳಿದ್ದಾರೆ.

ಚಮಕೌರ್‌ ಸಾಹಿಬ್‌ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್‌ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮಾರ್ಚ್‌ 2017ರಲ್ಲಿ ಸಿಎಂ ಅಮರಿಂದರ್‌ ಸಿಂಗ್‌ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದರು.

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT