ಮಂಗಳವಾರ, ಮೇ 17, 2022
27 °C

ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ: ಪ್ರಿಯಾಂಕಾ ಗಾಂಧಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬುಲಂದ್‌ಶಹರ್‌: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಘೋಷಿಸಿದ್ದಾರೆ. ಅಲ್ಲದೇ, ಚುನಾವಣೆಯಲ್ಲಿ ಎಲ್ಲ ಸ್ಥಾನಗಳಲ್ಲೂ, ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿಯೂ ಅವರು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಬುಲಂದ್‌ಶಹರ್‌ನಲ್ಲಿ ಭಾನುವಾರ ನಡೆದ ಪಕ್ಷದ ಸಭೆಯೊಂದರಲ್ಲಿ ಮಾತನಾಡಿರುವ ಅವರು, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದಂತೆ ಪಕ್ಷದ ಹಲವು ಕಾರ್ಯಕರ್ತರು ಕೇಳಿಕೊಂಡಿದ್ದಾರೆ. ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ, ಏಕಾಂಗಿಯಾಗಿ ಹೋರಾಡಲಿದೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಭಾನುವಾರ ವರದಿ ಮಾಡಿದೆ.

ಈ ಮಧ್ಯೆ, ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶವು ಅಚ್ಚರಿ ಮೂಡಿಸಲಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಭವಿಷ್ಯ ನುಡಿದಿದ್ದಾರೆ. ‘ ಚುನಾವಣೆಯಲ್ಲಿ ಪಕ್ಷವು ಸ್ಪಷ್ಟ ಬಹುಮತ ಪಡೆಯಲಿದೆ. ಬಿಜೆಪಿಯು 30 ಸ್ಥಾನಗಳನ್ನೂ ದಾಟುವುದಿಲ್ಲ,’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು