ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾ ರಾಮ್‌ ಆಸ್ಪತ್ರೆಗೆ ರಾಹುಲ್‌ ಗಾಂಧಿ; ತಾಯಿಯ ಆರೋಗ್ಯ ವಿಚಾರಿಸಿದ ಸಂಸದ

ಅಕ್ಷರ ಗಾತ್ರ

ನವದೆಹಲಿ:ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ಗುರುವಾರ ರಾತ್ರಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ತಾಯಿ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (75) ಅವರ ಆರೋಗ್ಯ ವಿಚಾರಿಸಿದರು.

ಕೋವಿಡ್‌ ನಂತರದ ಆರೋಗ್ಯ ಸಮಸ್ಯೆಯ ಕಾರಣಗಳಿಂದಾಗಿ ಸೋನಿಯಾ ಗಾಂಧಿ ಭಾನುವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೂನ್‌ 13ರಂದು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಗುರುವಾರ ರಾತ್ರಿ ಪೂರ್ತಿ ರಾಹುಲ್‌ ಆಸ್ಪತ್ರೆಯಲ್ಲೇ ಕಳೆದಿರುವ ಬಗ್ಗೆ ವರದಿಯಾಗಿದೆ.

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ರಾಹುಲ್‌ ಗಾಂಧಿ ಅವರನ್ನು ಸೋಮವಾರದಿಂದ ಸತತ ಮೂರು ದಿನ ವಿಚಾರಣೆಗೆ ಒಳಪಡಿಸಿತ್ತು. ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆದರೆ, ತಾಯಿಯ ಅನಾರೋಗ್ಯದ ಕಾರಣದಿಂದ ಸೋಮವಾರದವರೆಗೂ ವಿಚಾರಣೆ ಮುಂದೂಡುವಂತೆ ಇ.ಡಿಗೆ ರಾಹುಲ್‌ ಕೋರಿದ್ದಾರೆ.

ಜೂನ್‌ 2ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು ಹಾಗೂ ಅವರು ಗುಣಮುಖರಾಗಿದ್ದರು. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಕೆಲವು ದಿನಗಳು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಿದ್ದಾರೆ' ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೆವಾಲಾ ಭಾನುವಾರ ಹೇಳಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದವಿಚಾರಣೆಗೆ ಜೂನ್‌ 8ರಂದು ಹಾಜರಾಗುವಂತೆ ಸೋನಿಯಾ ಅವರಿಗೆ ಇ.ಡಿ ಈ ಹಿಂದೆ ಸೂಚಿಸಿತ್ತು. ಕೋವಿಡ್‌ ಕಾರಣದಿಂದಾಗಿ ಜೂನ್‌ 23ರಂದು ವಿಚಾರಣೆಗೆ ಬರುವಂತೆ ಹೊಸ ಸಮನ್ಸ್‌ನಲ್ಲಿ ಸೂಚಿಸಿತ್ತು.

ರಾಹುಲ್‌ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT