ಬುಧವಾರ, ಅಕ್ಟೋಬರ್ 28, 2020
28 °C

ಆನ್‌ಲೈನ್‌ ತರಗತಿ ಮಾರ್ಗಸೂಚಿ ಸಿದ್ಧಪಡಿಸಲು ಕಾರ್ಯಪಡೆ ರಚಿಸಿ: ಅಹ್ಮದ್‌ ಪಟೇಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಶಾಲಾ ಮಕ್ಕಳಿಗೆ ಆನ್‌ಲೈನ್‌ ತರಗತಿ ನಡೆಸುವುದಕ್ಕೆ ಮಾರ್ಗಸೂಚಿಗಳನ್ನು ರೂಪಿಸಲು ಕಾರ್ಯಪಡೆಯೊಂದನ್ನು ರಚಿಸಬೇಕು ಎಂದು ರಾಜ್ಯಸಭೆಯ ಕಾಂಗ್ರೆಸ್‌ ಸದಸ್ಯ ಅಹ್ಮದ್‌ ಪಟೇಲ್‌ ಶನಿವಾರ ಆಗ್ರಹಿಸಿದ್ದಾರೆ.  

ಶೂನ್ಯವೇಳೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಪಟೇಲ್‌, ‘ಕಂಪ್ಯೂಟರ್‌ ಹಾಗೂ ಸ್ಮಾರ್ಟ್‌ಫೋನ್‌ ಸೌಲಭ್ಯವಿಲ್ಲದ ಸಮಾಜದಲ್ಲಿನ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು’ ಎಂದು ಆಗ್ರಹಿಸಿದರು. 

‘ಆನ್‌ಲೈನ್‌ ತರಗತಿಗಳು ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ, ಯಾವ ರೀತಿಯಲ್ಲಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತಿದೆ ಎನ್ನುವ ಕುರಿತು ಅಧ್ಯಯನ ನಡೆಸಲು ಕಾರ್ಯಪಡೆ ರಚಿಸಬೇಕು. ರಾಜ್ಯಗಳ ಜೊತೆ ಚರ್ಚಿಸಿ ಆನ್‌ಲೈನ್‌ ತರಗತಿಗಳನ್ನು ನಡೆಸುವುದಕ್ಕೆ ರಾಷ್ಟ್ರೀಯ ಮಟ್ಟದ ನಿಯಮಾವಳಿಗಳನ್ನು ಸರ್ಕಾರ ರಚಿಸಬೇಕು’ ಎಂದು ಒತ್ತಾಯಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು