ಮಂಗಳವಾರ, ಮಾರ್ಚ್ 21, 2023
23 °C

2023ರ ಅಂತ್ಯಕ್ಕೆ ಅಯೋಧ್ಯೆಯಲ್ಲಿ ಮಸೀದಿ ಕಾಮಗಾರಿ ಪೂರ್ಣ: ಟ್ರಸ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಸುಪ್ರೀಂಕೋರ್ಟ್‌ ತೀರ್ಪಿನ ಅನುಸಾರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಯ ಕಾಮಗಾರಿಯು 2023ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಸೀದಿ ನಿರ್ಮಾಣ ಹೊಣೆ ಹೊತ್ತಿರುವ ಟ್ರಸ್ಟ್‌ ತಿಳಿಸಿದೆ.

‘ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಈ ತಿಂಗಳ ಅಂತ್ಯದ ಒಳಗೆ ಮಸೀದಿ, ಆಸ್ಪತ್ರೆ, ಸಮುದಾಯ ಅಡುಗೆ ಮನೆ, ಗ್ರಂಥಾಲಯ ಮತ್ತು ಸಂಶೋಧನಾ ಕೇಂದ್ರದ ನಕ್ಷೆಗೆ ಅನುಮೋದನೆ ದೊರಕಲಿದೆ ಎಂದು ಭಾವಿಸಿದ್ದೇವೆ. ನಂತರ ಮಸೀದಿ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಧನ್ನಿಪುರಿ ಅಯೋಧ್ಯೆ ಮಸೀದಿ ಕಾಮಗಾರಿಯು 2023ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಬಹುದು’ ಎಂದು ಇಂಡೊ ಕಲ್ಚರ್ ಫೌಂಡೇಶನ್‌ ಟ್ರಸ್ಟ್‌ ಕಾರ್ಯದರ್ಶಿ ಅಥಾರ್‌ ಹುಸೇನ್‌ ತಿಳಿಸಿದ್ದಾರೆ.

‘ಮಸೀದಿ ಮತ್ತಿತರ ಕಟ್ಟಡಗಳ ನಿರ್ಮಾಣದಲ್ಲಿ ದೇಣಿಗೆ ಸಂಗ್ರಹಿಸುವ ಪ್ರಯತ್ನಗಳು ನಡೆಯುತ್ತಿವೆ ’ ಎಂದು ಅವರು ತಿಳಿಸಿದ್ದಾರೆ.

2019ರಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಅಯೋಧ್ಯೆಯ ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿ, ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಐದು ಎಕರೆ ಭೂಮಿಯನ್ನು ಮಂಜೂರು ಮಾಡಲು ಸೂಚಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು