ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಹಿಂಸಾಚಾರ: ರಾಜ್ಯಪಾಲರ ಪತ್ರದಲ್ಲಿ ವಾಸ್ತವಾಂಶಗಳಿಲ್ಲ ಎಂದ ಟಿಎಂಸಿ

Last Updated 16 ಜೂನ್ 2021, 4:04 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರ ಪ್ರಕರಣಗಳ ಬಗ್ಗೆ ರಾಜ್ಯಪಾಲರು ಬರೆದ ಪತ್ರದಲ್ಲಿ ವಾಸ್ತವಾಂಶವಿಲ್ಲ ಎಂದು ಟಿಎಂಸಿ ಹೇಳಿದೆ.

ರಾಜ್ಯದಲ್ಲಿ ಚುನಾವಣೆಯ ನಂತರ ನಡೆದ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೌನವಾಗಿದ್ದಾರೆ ಎಂದು ರಾಜ್ಯಪಾಲ ಜಗದೀಪ್‌ ಧನಖರ್‌ ತಮ್ಮ ಪತ್ರದಲ್ಲಿ ಆರೋಪಿಸಿದ್ದರು.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಟಿಎಂಸಿಯು, 'ರಾಜ್ಯಪಾಲರ ಪತ್ರವು ನೈಜ ಸಂಗತಿಗಳಿಂದ ಕೂಡಿಲ್ಲ. ಇದು ಸಾಂವಿಧಾನಿಕ ನೀತಿ ನಿಯಮಗಳನ್ನು ಉಲ್ಲಂಘಿಸಿದೆ' ಎಂದು ಆರೋಪ ಮಾಡಿದೆ.

ಹಿಂಸಾಚಾರದಲ್ಲಿ ಸಂತ್ರಸ್ತರಾದ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಲು ಮಮತಾ ಬ್ಯಾನರ್ಜಿ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಟಿಎಂಸಿ, 'ರಾಜ್ಯಪಾಲರ ಸಂವಹನ ಪ್ರಕ್ರಿಯೆ ಸಾಂವಿಧಾನಿಕ ಮಾನದಂಡಗಳನ್ನು ಗಾಳಿಗೆ ತೂರಿದೆ' ಎಂದು ಹೇಳಿದೆ.

ಚುನಾವಣಾ ಆಯೋಗದ ಕಾನೂನು ಮತ್ತು ಸುವ್ಯವಸ್ಥೆ ಅಡಿಯಲ್ಲಿ 16 ಮಂದಿಯ ಹತ್ಯೆಯಾಗಿದೆ. ಅವರಲ್ಲಿ ಅರ್ಧದಷ್ಟು ಜನ ಟಿಎಂಸಿ ಮತ್ತು ಇನ್ನರ್ಧದಷ್ಟು ಜನರು ಬಿಜೆಪಿಗೆ ಸೇರಿದವರು. ಒಬ್ಬ ಸಂಯುಕ್ತ ಮೋರ್ಚಾಗೆ ಸೇರಿದ ವ್ಯಕ್ತಿ. ತಾರತಮ್ಯ ಮಾಡದೆ ಆ ಎಲ್ಲರ ಕುಟುಂಬದವರಿಗೂ ₹ 2 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮಮತಾ ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT