₹500ಕ್ಕೆ ಅಡುಗೆ ಅನಿಲ ಸಿಲಿಂಡರ್: ಗೆಹಲೋತ್

ಜೈಪುರ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಅನ್ನು ₹ 500ಕ್ಕೆ ನೀಡುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಜನತೆಗೆ ಭರವಸೆ ನೀಡಿದ್ದಾರೆ.
ಅಲ್ವಾರ್‌ನಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವರ್ಷಕ್ಕೆ ಇಂತಹ 12
ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದರು.
₹ 1050ಕ್ಕೆ ದೊರೆಯುವ ಗ್ಯಾಸ್ ಸಿಲಿಂಡರ್ ಅನ್ನು ಕೇವಲ ₹500ಕ್ಕೆ ನೀಡಲಿದ್ದೇವೆ. ಈ ಯೋಜನೆ ಏಪ್ರಿಲ್ ತಿಂಗಳಿಂದ ಜಾರಿಗೆ ಬರಲಿದೆ ಎಂದು ಹೇಳಿದರು.
ಮುಂದಿನ ತಿಂಗಳು ಮಂಡಿಸುವ ಬಜೆಟ್‌ನಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ ಕಿಚನ್ ಕಿಟ್ ವಿತರಿಸುವ ಯೋಜನೆಯನ್ನು ಘೋಷಣೆ ಮಾಡಿ, ಏಪ್ರಿಲ್‌ನಿಂದ ಜಾರಿಗೆ ತರಲಾಗುವುದು ಎಂದರು.
ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ – ರಾಹುಲ್: ‘ಭಾರತ ಜೋಡೊ ಯಾತ್ರೆ ಮೂಲಕ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದರು.
ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಗರಲ್ಲಿ ಕೆಲವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಯಾತ್ರೆ ಹೊರಟಿರುವುದೇಕೆ ಎಂದು ಕೇಳುತ್ತಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದ್ದೇನೆ ಎಂಬುದೇ ನನ್ನ ಉತ್ತರ’ ಎಂದು
ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.